Friday, July 24, 2026
Join WhatsApp Group
HomeLocal NewsSIR ಯಶಸ್ವಿಗೆ ಬೂತ್ ಏಜೆಂಟ್‌ಗಳ ಪಾತ್ರ ಮಹತ್ವದ್ದು

SIR ಯಶಸ್ವಿಗೆ ಬೂತ್ ಏಜೆಂಟ್‌ಗಳ ಪಾತ್ರ ಮಹತ್ವದ್ದು

ಯಲ್ಲಾಪುರ: ಮುಂಬರುವ ದಿನಗಳಲ್ಲಿ ಪಕ್ಷವನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸುವುದರ ಜೊತೆಗೆ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಯಶಸ್ವಿಗೊಳಿಸಲು ಬೂತ್ ಲೆವೆಲ್ ಏಜೆಂಟ್‌ಗಳ (BLA) ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಶಾಸಕ ಭೀಮಣ್ಣ ಟಿ.ನಾಯ್ಕ ಹೇಳಿದರು.

ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಮಾಹಿತಿ ಶಿಬಿರದಲ್ಲಿ ಬೂತ್ ಲೆವೆಲ್ ಏಜೆಂಟ್‌ಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯದಲ್ಲಿ ಪ್ರತಿಯೊಬ್ಬ ಬೂತ್ ಏಜೆಂಟ್ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಮತದಾರರ ಪಟ್ಟಿಯಲ್ಲಿ ಯಾವುದೇ ಅರ್ಹ ಮತದಾರರು ಹೊರಗುಳಿಯದಂತೆ ಹಾಗೂ ಅಗತ್ಯ ತಿದ್ದುಪಡಿಗಳು ಸಮರ್ಪಕವಾಗಿ ಆಗುವಂತೆ ಎಲ್ಲರೂ ಸಂಘಟಿತವಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವ್ಕರ್, ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾಧ್ಯಕ್ಷ ಪ್ರಸನ್ನ ಶೆಟ್ಟಿ, ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿ.ಎಸ್. ಭಟ್, ಕಾಂಗ್ರೆಸ್ ಸಾಮಾಜಿಕ ಜಾಲತಾಣ ಯಲ್ಲಾಪುರ ವಿಭಾಗದ ಅಧ್ಯಕ್ಷರು ಮತ್ತು ಗ್ಯಾರಂಟಿ ಸಮಿತಿಯ ಸದಸ್ಯರಾದ ಮುಸರತ್ ಖಾನ್ ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಸದಸ್ಯರು, ಬೂತ್ ಲೆವೆಲ್ ಏಜೆಂಟ್‌ಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share