Thursday, October 22, 2026
HomeCrimeಶಿರಸಿ | ಗಾಂಜಾ ಸೇವನೆ ಆರೋಪ; ಮೆಕ್ಯಾನಿಕ್ ವಿರುದ್ಧ ಪ್ರಕರಣ

ಶಿರಸಿ | ಗಾಂಜಾ ಸೇವನೆ ಆರೋಪ; ಮೆಕ್ಯಾನಿಕ್ ವಿರುದ್ಧ ಪ್ರಕರಣ

ಶಿರಸಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ಶಿರಸಿಯ ಮೆಕ್ಯಾನಿಕ್‌ ಪರಿಕ್ಷೀತ್ ಶ್ರೀನಿವಾಸ ಪತ್ತಾರ ವಿರುದ್ಧ ಶಿರಸಿ ಹೊಸಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ದೂರಿನ ಪ್ರಕಾರ, ಅ.3ರಂದು ಬೆಳಿಗ್ಗೆ 11.15ರ ಸುಮಾರಿಗೆ ಶಿರಸಿ ಕಾಲೇಜು ರಸ್ತೆಯ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದ ಕ್ರಾಸ್‌ ಬಳಿ ಸಾರ್ವಜನಿಕ ಸ್ಥಳದಲ್ಲಿ ಪರಿಕ್ಷೀತ್ ಗಾಂಜಾ ಮಾದಕ ವಸ್ತು ಸೇವನೆ ಮಾಡಿರುವ ಅನುಮಾನ ಪೊಲೀಸರಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಶಿರಸಿ ಹೊಸಮಾರುಕಟ್ಟೆ ಪೊಲೀಸ್ ಠಾಣೆಯ ತನಿಖಾ ಪಿಎಸ್ಐ ಗೀತಾ ಕಲಘಟಗಿ ಅವರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಳಿಕ ಗಾಂಜಾ ಸೇವನೆ ಮಾಡಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಶಿರಸಿಯ ಪಂಡಿತ್ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಆತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಪಿಎಸ್ಐ ಗೀತಾ ಕಲಘಟಗಿ ಅವರು ಸರ್ಕಾರದ ಪರವಾಗಿ ದೂರು ನೀಡಿದ್ದು, ಅದರ ಆಧಾರದ ಮೇಲೆ ಶಿರಸಿ ಹೊಸಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share