Friday, July 24, 2026
Join WhatsApp Group
HomeLocal Newsಅಮಲಲ್ಲಿ ತೇಲಾಡಿದ ಯುವಕನ ವಿರುದ್ಧ ಪ್ರಕರಣ

ಅಮಲಲ್ಲಿ ತೇಲಾಡಿದ ಯುವಕನ ವಿರುದ್ಧ ಪ್ರಕರಣ

ಶಿರಸಿ: ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ರಾಮನಬೈಲ್ ಕನ್ನಡ ಶಾಲೆ ಸಮೀಪದ ನಿವಾಸಿ ಪೈಜಾನ ಅಬ್ದುಲ್ ಸಮದ ಮುಲ್ಲಾ (22) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತ ವೆಲ್ಡಿಂಗ್ ಕೆಲಸ ಮಾಡುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೇ 11ರಂದು ಬೆಳಗ್ಗೆ 10:20ರ ಸುಮಾರಿಗೆ ಶಿರಸಿ ನಗರದ ಕ್ಯಾಪ್ಟನ್ ಕ್ಯಾಂಪ್ ಕಡೆ ಹೋಗುವ ಕಚ್ಚಾ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳು ನೀಡಿದ ವರದಿಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪೊಲೀಸ್ ಉಪನಿರೀಕ್ಷಕ ನರಸಿಂಹಲು ಅವರ ದೂರಿನ ಮೇರೆಗೆ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share