ಶಿರಸಿ: ನಗರದ ಮುಸ್ಲಿಂ ಗಲ್ಲಿಯಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿರುವ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದು, ದಾಳಿಯಲ್ಲಿ ಕ್ರೆಟಾ ಕಾರು, ಸುಮಾರು 57 ಕೆ.ಜಿ. ಮಾಂಸ ಹಾಗೂ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಶಿರಸಿ ಸಿಪಿಐ ಸಂಪತ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಜಿಲ್ಲೆಯ ಅಕ್ಕಿಆಲೂರಿನಲ್ಲಿರುವ ಇನ್ನುಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ತಂಡ ರಚಿಸಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಈ ಸಂಬಂಧ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ ಹಾಗೂ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ. ಸಿಪಿಐ ಸಂಪತ್ ಕುಮಾರ್ ಅವರೊಂದಿಗೆ ಪೊಲೀಸ್ ಸಿಬ್ಬಂದಿಗಳಾದ ಗುರುರಾಜ್, ರಾಮದೇವ್, ಅಶೋಕ್, ಮಹದೇವ್ ಹಾಗೂ ಶಿವಾನಂದ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.