Friday, July 24, 2026
Join WhatsApp Group
HomeLocal Newsಶಿರಸಿ–ಕುಮಟಾ ಮಾರ್ಗದಲ್ಲಿ ಭೀಕರ ಅಪಘಾತ: 40ಕ್ಕೂ ಹೆಚ್ಚು ಮಂದಿಗೆ ಗಾಯ

ಶಿರಸಿ–ಕುಮಟಾ ಮಾರ್ಗದಲ್ಲಿ ಭೀಕರ ಅಪಘಾತ: 40ಕ್ಕೂ ಹೆಚ್ಚು ಮಂದಿಗೆ ಗಾಯ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶಿರಸಿ–ಕುಮಟಾ ಮಾರ್ಗದ ಕೊಳಗಿಬೀಸ್ ಬಳಿ ಎರಡು ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಈ ದುರಂತದಲ್ಲಿ 40ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಶಿರಸಿಯಿಂದ ಕುಮಟಾಗೆ ಹೊರಟಿದ್ದ ಖಾಸಗಿ ಬಸ್ ನಡುವೆ ಈ ಅಪಘಾತ ನಡೆದಿದೆ. ಎರಡೂ ಬಸ್ಸುಗಳು ವೇಗದಲ್ಲಿ ಸಂಚರಿಸುತ್ತಿದ್ದ ಹಿನ್ನೆಲೆಯಲ್ಲಿ ಡಿಕ್ಕಿಯನ್ನು ತಪ್ಪಿಸಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಬಸ್ಸಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಗಾಯಗೊಂಡ ಪ್ರಯಾಣಿಕರು ಸಹಾಯಕ್ಕಾಗಿ ಕೂಗಿಕೊಂಡಿದ್ದು, ತಕ್ಷಣವೇ ಆಂಬುಲೆನ್ಸ್‌ಗಳ ಮೂಲಕ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದುಬಂದಿದೆ.

ಅಪಘಾತದ ಪರಿಣಾಮವಾಗಿ ರಸ್ತೆ ಮೇಲೆ ಭಾರೀ ಸಂಚಾರ ದಟ್ಟಣೆ ಉಂಟಾಗಿದ್ದು, ಎರಡು ಕಡೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸ್ಥಳಕ್ಕೆ ಪೊಲೀಸರು ಆಗಮಿಸಿ, ಅಪಘಾತಕ್ಕೀಡಾದ ಬಸ್ಸುಗಳನ್ನು ರಸ್ತೆ ಪಕ್ಕಕ್ಕೆ ಸರಿಸುವ ಕಾರ್ಯ ಕೈಗೊಂಡು ಸಂಚಾರವನ್ನು ಪುನಃ ಆರಂಭಿಸಲು ಕ್ರಮವಹಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share