Friday, July 24, 2026
Join WhatsApp Group
HomeLocal Newsನೂತನ ಬಸ್ ಸೇವೆಯ ಸದುಪಯೋಗ ಪಡೆಯಿರಿ

ನೂತನ ಬಸ್ ಸೇವೆಯ ಸದುಪಯೋಗ ಪಡೆಯಿರಿ

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಭಕ್ತರು ಹಾಗೂ ಸಾರ್ವಜನಿಕರಿಗೆ ಸವದತ್ತಿ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಸುಲಭ ಸಂಚಾರ ಕಲ್ಪಿಸುವ ಉದ್ದೇಶದಿಂದ ಆರಂಭಿಸಿರುವ ಶಿರಸಿ–ಮುಂಡಗೋಡ–ಸವದತ್ತಿ ನೂತನ ಬಸ್ ಸೇವೆಯ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಶಾಸಕಶಿವರಾಮ ಹೆಬ್ಬಾರ್ ಕರೆ ನೀಡಿದರು.

ಮುಂಡಗೋಡ ಪಟ್ಟಣದ ಬಸ್ ನಿಲ್ದಾಣದಲ್ಲಿ ಮಂಗಳವಾರ ನೂತನ ಬಸ್ ಸೇವೆಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿ ಅವರು ಮಾತನಾಡಿದರು.ಧಾರ್ಮಿಕ ಕ್ಷೇತ್ರಕ್ಕೆ ತೆರಳುವ ಭಕ್ತರಿಗೆ ಈ ಬಸ್ ಸೇವೆ ಹೆಚ್ಚು ಅನುಕೂಲವಾಗಲಿದ್ದು, ಜನಸಾಮಾನ್ಯರ ಪ್ರಯಾಣವನ್ನು ಇನ್ನಷ್ಟು ಸುಗಮಗೊಳಿಸಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ರವಿಗೌಡ ಪಾಟೀಲ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ರಾಠೋಡ್, ಕಾಂಗ್ರೆಸ್ ಹಿಂದುಳಿದ ವರ್ಗ ಸಮಿತಿಯ ತಾಲೂಕು ಅಧ್ಯಕ್ಷ ದೇವು ಪಾಟೀಲ್, ಪ್ರಚಾರ ಸಮಿತಿಯ ಅಧ್ಯಕ್ಷ ಕೆ.ಸಿ. ಗಲಬಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮಹಮ್ಮದ್ ಗೌಸ್ ಮಕಾನದಾರ್, ಸಾಮಾಜಿಕ ಜಾಲತಾಣದ ಅಧ್ಯಕ್ಷ ಧರ್ಮರಾಜ ನಾಡಿಗೇರ್, ಪ್ರಮುಖರಾದ ಗೋಪಾಲ ಪಾಟೀಲ್, ರಜಾ ಫಠಾಣ, ರಫೀಕ್ ಇನಾಮದಾರ್ ಸೇರಿದಂತೆ ಉತ್ತರ ಪಶ್ಚಿಮ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share