Monday, September 7, 2026
Join WhatsApp Group
HomeCrimeಗಾಂಜಾ ಮಾರಲು ಶಿರಸಿಗೆ ಬಂದ!

ಗಾಂಜಾ ಮಾರಲು ಶಿರಸಿಗೆ ಬಂದ!

ಹಾವೇರಿ ಮೂಲದ ಆರೋಪಿ ಬಂಧನ | 272 ಗ್ರಾಂ ಗಾಂಜಾ, ಬೈಕ್ ಜಪ್ತಿ

ಶಿರಸಿ: ಇಲ್ಲಿನ ಹೊಸಮಾರುಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆತನಿಂದ 272 ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ಪಲ್ಸರ್ ಬೈಕ್‌ ಅನ್ನು ವಶಪಡಿಸಿಕೊಂಡಿದ್ದಾರೆ.

ಶಿರಸಿ ನಗರದ ಯಲ್ಲಾಪುರ ರಸ್ತೆಯ ಅರಣ್ಯ ನೌಕರರ ಸಮುದಾಯ ಭವನದ ಸಮೀಪ ಜುಲೈ 8ರಂದು ರಾತ್ರಿ 8.30ರ ಸುಮಾರಿಗೆ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದರು.

ದಾಳಿಯ ವೇಳೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿನ ಚೆನ್ನವೀರೇಶ್ವರ ನಗರದ ನಿವಾಸಿ ಸೈಯದ್ ಸಾದೀಕ್ (27) ಎಂಬಾತನನ್ನು ಬಂಧಿಸಲಾಯಿತು. ಆರೋಪಿಯಿಂದ ಸುಮಾರು ₹15,000 ಮೌಲ್ಯದ 272 ಗ್ರಾಂ ಗಾಂಜಾ ಹಾಗೂ ಸಾಗಾಟಕ್ಕೆ ಬಳಸಿದ್ದ ಪಲ್ಸರ್ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಶಿರಸಿ ಹೊಸಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಈ ಕಾರ್ಯಾಚರಣೆಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ., ಶಿರಸಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕಿ ಗೀತಾ ಪಾಟೀಲ್ ಹಾಗೂ ಶಿರಸಿ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಸಂಪತ್‌ಕುಮಾರ್ ಸಿ ಅವರ ಮಾರ್ಗದರ್ಶನದಲ್ಲಿ ನಡೆಸಲಾಯಿತು.

ಶಿರಸಿ ಹೊಸಮಾರುಕಟ್ಟೆ ಪೊಲೀಸ್ ಠಾಣೆಯ ಪಿಎಸ್‌ಐಗಳಾದ ಬಸವರಾಜ್ ಕನಶೆಟ್ಟಿ ಮತ್ತು ಗೀತಾ ಜಿ. ಕಲಘಟಗಿ ಅವರ ನೇತೃತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿಗಳಾದ ಕೋಟೇಶ ನಾಗರವಳ್ಳಿ, ಸಂದೀಪ್ ನಿಂಬಾಯಿ, ರಾಕೇಶ್ ಎನ್.ಎಚ್., ಮಂಜುನಾಥ ಕೆ., ಅಶೋಕ ಹರಿಕಂತ್ರ, ಸಂತೋಷ ಆರ್.ಕೆ., ಲಕ್ಷಣ ನಾಯಕ, ಅರುಣ ಲಮಾಣಿ ಹಾಗೂ ಚಾಲಕ ಹನುಮಂತ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share