Friday, July 24, 2026
Join WhatsApp Group
HomeInformationಶಿರಸಿ ಅಂಚೆ ವಿಭಾಗದಲ್ಲಿದೆ ವಿವಿಧ ಹುದ್ದೆ: ಮೇ 18ಕ್ಕೆ ನೇರ ಸಂದರ್ಶನ

ಶಿರಸಿ ಅಂಚೆ ವಿಭಾಗದಲ್ಲಿದೆ ವಿವಿಧ ಹುದ್ದೆ: ಮೇ 18ಕ್ಕೆ ನೇರ ಸಂದರ್ಶನ

ಶಿರಸಿ: ಶಿರಸಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ (PLI) ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ (RPLI) ಯೋಜನೆಗಳಿಗೆ ಏಜೆಂಟರು ಮತ್ತು ಫೀಲ್ಡ್ ಆಫೀಸರ್‌ಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.

ಸಂದರ್ಶನವು ಮೇ 18ರಂದು ಬೆಳಿಗ್ಗೆ 11 ಗಂಟೆಗೆ ಹೊಸ ಮಾರುಕಟ್ಟೆ ಆವರಣದಲ್ಲಿರುವ ಶಿರಸಿ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರ, ಇತ್ತೀಚಿನ ಭಾವಚಿತ್ರ ಹಾಗೂ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯೊಂದಿಗೆ ಹಾಜರಾಗಬೇಕು.

ಡೈರೆಕ್ಟ್ ಏಜೆಂಟ್ ಹುದ್ದೆ:
ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿದ್ದು, 18 ವರ್ಷ ಮೇಲ್ಪಟ್ಟವರಾಗಿರಬೇಕು. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜೆಂಟರು/ಸಲಹೆಗಾರರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ಮಾಜಿ ಸೈನಿಕರು ಹಾಗೂ ಸ್ಥಳೀಯ ಸಂಸ್ಥೆಗಳ ಮಾಜಿ ಸದಸ್ಯರಿಗೆ ಆದ್ಯತೆ ನೀಡಲಾಗುತ್ತದೆ.

ಫೀಲ್ಡ್ ಆಫೀಸರ್ ಹುದ್ದೆ:
ರಾಜ್ಯ ಅಥವಾ ಕೇಂದ್ರ ಸರ್ಕಾರದ ನಿವೃತ್ತ ನೌಕರರಾಗಿರಬೇಕು. ಆಯ್ಕೆಯಾದವರು ರೂ.5,000 ಭದ್ರತಾ ಠೇವಣಿಯನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ್ ಪತ್ರ ರೂಪದಲ್ಲಿ ಜಮಾ ಮಾಡಬೇಕು.

ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಗದಿತ ವೇತನವಿಲ್ಲ; ಅವರ ವ್ಯವಹಾರಕ್ಕೆ ಅನುಗುಣವಾಗಿ ಕಮೀಶನ್ ನೀಡಲಾಗುತ್ತದೆ. ಅಭ್ಯರ್ಥಿಗಳು ಇತರೆ ಯಾವುದೇ ವಿಮಾ ಕಂಪನಿಗಳ ಏಜೆಂಟ್ ಆಗಿರಬಾರದು.

ಹೆಚ್ಚಿನ ಮಾಹಿತಿಗಾಗಿ ಅಂಚೆ ಜೀವ ವಿಮೆ ಅಭಿವೃದ್ಧಿ ಅಧಿಕಾರಿ ಸಂಪರ್ಕ ಸಂಖ್ಯೆ 6362609961 ಅಥವಾ ಅಧಿಕೃತ ವೆಬ್‌ಸೈಟ್‌ನ್ನು ಸಂಪರ್ಕಿಸಲು ಸೂಚಿಸಲಾಗಿದೆ ಎಂದು ಶಿರಸಿ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share