Friday, July 24, 2026
Join WhatsApp Group
HomeCrimeಒಂದು ರೂಪಾಯಿಗೆ 80 ರೂ. ಕನಸು ಖಾಕಿಯಿಂದ ಭಗ್ನ!

ಒಂದು ರೂಪಾಯಿಗೆ 80 ರೂ. ಕನಸು ಖಾಕಿಯಿಂದ ಭಗ್ನ!

ಶಿರಸಿ:ಸಾರ್ವಜನಿಕರಿಗೆ ಒಂದು ರೂಪಾಯಿಗೆ 80 ರೂಪಾಯಿ ನೀಡುವುದಾಗಿ ಆಮಿಷವೊಡ್ಡಿ ಓಸಿ ಜೂಜಾಟ ನಡೆಸುತ್ತಿದ್ದ ಆರೋಪದಡಿ ಶಿರಸಿ ತಾಲೂಕಿನ ಕೋಡ್ನಗದ್ದೆ ನಿವಾಸಿ ಹರೀಶ್ ರಾಮ ಮರಾಠಿ (38) ಎಂಬುವನನ್ನು ಶಿರಸಿ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

ಜುಲೈ 14ರಂದು ಸಂಜೆ ಸುಮಾರು 5.35ರ ವೇಳೆಗೆ ಶಿರಸಿ-ಹುಲೇಕಲ್ ರಸ್ತೆಯ ಮಾಣಗದ್ದೆ ಕ್ರಾಸ್‌ ಬಳಿ ಸಾರ್ವಜನಿಕ ಸ್ಥಳದಲ್ಲಿ ಓಸಿ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಉಪನಿರೀಕ್ಷಕ ಸಂತೋಷಕುಮಾರ ಎಂ ನೇತೃತ್ವದಲ್ಲಿ ಸಿಬ್ಬಂದಿ ಹಾಗೂ ಪಂಚರೊಂದಿಗೆ ದಾಳಿ ನಡೆಸಲಾಯಿತು.

ದಾಳಿಯ ವೇಳೆ ಆರೋಪಿ ಸಾರ್ವಜನಿಕರಿಂದ ಹಣ ಪಡೆದು ಓಸಿ ಅಂಕೆ ಸಂಖ್ಯೆಗಳ ಚೀಟಿ ಬರೆದುಕೊಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಆರೋಪಿಯಿಂದ ₹350 ನಗದು, ಒಂದು ಬಾಲ್‌ಪೆನ್‌, ಓಸಿ ಅಂಕೆ ಸಂಖ್ಯೆ ಬರೆದ ಒಂದು ಚೀಟಿ ಹಾಗೂ ಚೀಟಿ ಬರೆಯಲು ಕತ್ತರಿಸಿ ಇಟ್ಟಿದ್ದ ನಾಲ್ಕು ಸಣ್ಣ ಚೀಟಿಗಳನ್ನುವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share