ಶಿರಸಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ಶಿರಸಿಯ ರಾಮನಬೈಲ್ ನಿವಾಸಿ 24 ವರ್ಷದ ಅರ್ಪಾತ್ ಅಬ್ದುಲ್ ಗಫಾರ್ ಖಾನ್ ವಿರುದ್ಧ ಶಿರಸಿ ಹೊಸಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಜುಲೈ 5ರಂದು ಬೆಳಿಗ್ಗೆ 9.45ರ ಸುಮಾರಿಗೆ ಶಿರಸಿ-ಯಲ್ಲಾಪುರ ರಸ್ತೆಯ ಅರ್ಬನ್ ಬ್ಯಾಂಕ್ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಆರೋಪಿಯು ಗಾಂಜಾ ಸೇವನೆಯ ಅಮಲಿನಲ್ಲಿರುವ ಶಂಕೆಯ ಮೇರೆಗೆ ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಶಿರಸಿಯ ಪಂಡಿತ್ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಪೊಲೀಸ್ ಉಪನಿರೀಕ್ಷಕ ಬಸವರಾಜ ಕನಶೆಟ್ಟಿ ಅವರು ಸರ್ಕಾರದ ಪರವಾಗಿ ನೀಡಿದ ದೂರಿನ ಆಧಾರದ ಮೇಲೆ ಶಿರಸಿ ಹೊಸಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.