Monday, September 7, 2026
Join WhatsApp Group
HomeLocal Newsಯುವಕನ ಜೀವಕ್ಕೆ ಉರುಳಾದ ಆಸಿಡ್‌ ಅವಘಡ

ಯುವಕನ ಜೀವಕ್ಕೆ ಉರುಳಾದ ಆಸಿಡ್‌ ಅವಘಡ

ಶಿರಸಿ: ದೀರ್ಘಕಾಲದ ಆರೋಗ್ಯ ಸಮಸ್ಯೆಯಿಂದ ಮನನೊಂದಿದ್ದ ಯುವಕನೊಬ್ಬ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಶಿರಸಿ ತಾಲೂಕಿನ ಉಂಚಳ್ಳಿ ಸಮೀಪದ ಬಿಳಗಿರಿಕೊಪ್ಪ ಗ್ರಾಮದಲ್ಲಿ ನಡೆದಿದೆ.

ಮೃತನನ್ನು ನವೀನ ಮಂಜುನಾಥ ಶೇಟ್ (30) ಎಂದು ಗುರುತಿಸಲಾಗಿದೆ.

ಕುಟುಂಬದವರ ಮಾಹಿತಿ ಪ್ರಕಾರ, ನವೀನ ಕಳೆದ ಕೆಲವು ವರ್ಷಗಳ ಹಿಂದೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕರಾಡದಲ್ಲಿ ಬಂಗಾರದ ಕೆಲಸ ಮಾಡುತ್ತಿದ್ದ ವೇಳೆ ಆಸಿಡ್ ಮುಖಕ್ಕೆ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ. ಈ ಘಟನೆಯಿಂದ ಮುಖದ ಎಡಭಾಗ ಹಾಗೂ ಮೂಗು ಸುಟ್ಟುಹೋಗಿದ್ದು, ಬಳಿಕ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು.

ಇತ್ತೀಚೆಗೆ ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ಅವನಿಗೆ ಶಸ್ತ್ರಚಿಕಿತ್ಸೆಯನ್ನೂ ಮಾಡಿಸಲಾಗಿತ್ತು. ಆರೋಗ್ಯ ಸಮಸ್ಯೆಯನ್ನು ಮನಸ್ಸಿಗೆ ಹಚ್ಚಿಕೊಂಡಿದ್ದ ನವೀನ, ಮನೆಯಲ್ಲಿ ಒಬ್ಬನೇ ಇದ್ದ ವೇಳೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬದವರು ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯ ಕುರಿತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share