Sunday, September 20, 2026
Join WhatsApp Group
HomeLocal Newsಕೌಶಲ್ಯಕ್ಕೆ ಉದ್ಯೋಗದ ರೂಪ ನೀಡಿ

ಕೌಶಲ್ಯಕ್ಕೆ ಉದ್ಯೋಗದ ರೂಪ ನೀಡಿ

ಬಂಗಾರಮಕ್ಕಿ: ಮಹಿಳೆಯರು ಸ್ವಾವಲಂಬಿಗಳಾಗಿ ಆರ್ಥಿಕವಾಗಿ ಸಬಲರಾಗಲು ಕೌಶಲ್ಯಾಧಾರಿತ ತರಬೇತಿಗಳು ಸಹಕಾರಿಯಾಗುತ್ತವೆ ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿಗಳು ಹಾಗೂ ಸಿಲೆಕ್ಟ್ ಫೌಂಡೇಶನ್ ಅಧ್ಯಕ್ಷರಾದ ಪರಮಪೂಜ್ಯ ಶ್ರೀ ಮಾರುತಿ ಗುರೂಜಿ ಹೇಳಿದರು.

ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ಸಿಲೆಕ್ಟ್ ಫೌಂಡೇಶನ್ (ರಿ) ಹಾಗೂ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ ಸೆ.17ರಿಂದ 30ರವರೆಗೆ 14 ದಿನಗಳ ಕಾಲ ಆಯೋಜಿಸಿರುವ ಉಚಿತ ಕೃತಕ ಆಭರಣ ತಯಾರಿಕೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಹಿಳೆಯರು ತಮ್ಮಲ್ಲಿರುವ ಕೌಶಲ್ಯವನ್ನು ಉದ್ಯೋಗ ಹಾಗೂ ಸ್ವಉದ್ಯಮವಾಗಿ ರೂಪಿಸಿಕೊಂಡು ಕುಟುಂಬದ ಆರ್ಥಿಕ ಪ್ರಗತಿಗೆ ಕೊಡುಗೆ ನೀಡಬಹುದು. ಇಂತಹ ಉಚಿತ ತರಬೇತಿ ಕಾರ್ಯಕ್ರಮಗಳು ಗ್ರಾಮೀಣ ಭಾಗದ ಮಹಿಳೆಯರಿಗೆ ಹೊಸ ಅವಕಾಶಗಳನ್ನು ಕಲ್ಪಿಸುವುದರ ಜೊತೆಗೆ ಸ್ವಾವಲಂಬನೆಯತ್ತ ಮುನ್ನಡೆಯಲು ಪ್ರೇರಣೆ ನೀಡುತ್ತವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆರ್‌ಸಿಟಿ ನಿರ್ದೇಶಕ ಹರೀಶ್, ಎನ್‌ಆರ್‌ಎಲ್‌ಎಂ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪದ್ಮಾವತಿ ಗೌಡ, ಎನ್‌ಆರ್‌ಎಲ್‌ಎಂ ವಲಯ ಮೇಲ್ವಿಚಾರಕಿ ಮೇಘನಾ ಭಟ್ಟ, ಶ್ರೀಗೌರೀಶ್ ಹಾಗೂ ತರಬೇತಿ ಪಡೆಯಲು ಆಗಮಿಸಿದ್ದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ತರಬೇತಿ ಅವಧಿಯಲ್ಲಿ ಕೃತಕ ಆಭರಣಗಳ ವಿನ್ಯಾಸ, ತಯಾರಿಕೆ ಹಾಗೂ ಸಂಬಂಧಿತ ಕೌಶಲ್ಯಗಳ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಗುತ್ತಿದ್ದು, ತರಬೇತಿಯಲ್ಲಿ ಭಾಗವಹಿಸುವವರು ಸ್ವಉದ್ಯೋಗ ಆರಂಭಿಸಲು ಅಗತ್ಯವಾದ ಕೌಶಲ್ಯವನ್ನು ಪಡೆದುಕೊಳ್ಳಲಿದ್ದಾರೆ. ಮಹಿಳೆಯರಲ್ಲಿ ಉದ್ಯಮಶೀಲತೆಯನ್ನು ಬೆಳೆಸುವ ಹಾಗೂ ಆದಾಯದಲ್ಲಿ ಸ್ವಾವಲಂಬನೆ ಸಾಧಿಸಲು ಉತ್ತೇಜನ ನೀಡುವ ಉದ್ದೇಶದಿಂದ ಈ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad

Most Popular

error: Content is protected !!
Share