Friday, July 24, 2026
Join WhatsApp Group
HomeNationalಬರಲಿದೆ ಲಿಲ್ಲಿಪುಟ್ LPG ಸಿಲಿಂಡರ್!

ಬರಲಿದೆ ಲಿಲ್ಲಿಪುಟ್ LPG ಸಿಲಿಂಡರ್!

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಯಿಂದ ದೇಶದಲ್ಲಿ LPG ಸರಬರಾಜು ಒತ್ತಡಕ್ಕೆ ಒಳಗಾಗಿದ್ದು, ಪ್ರಮುಖ ಮಹಾನಗರಗಳಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಹೆಚ್ಚಾಗಿದೆ.

ಈ ಹಿನ್ನೆಲೆಯಲ್ಲಿ ಸಾಮಾನ್ಯ ಜನರಿಗೆ, ವಿಶೇಷವಾಗಿ ವಲಸೆ ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಗೆ ನೆರವು ನೀಡಲು ಕೇಂದ್ರ ಸರ್ಕಾರ ಹೊಸ ಕ್ರಮಕ್ಕೆ ಮುಂದಾಗಿದೆ.

ಪೆಟ್ರೋಲಿಯಂ ಸಚಿವಾಲಯವು 5 ಕಿಲೋಗ್ರಾಂ ಸಣ್ಣ LPG ಸಿಲಿಂಡರ್ ಪರಿಚಯಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ. ಈ ಕುರಿತು ಶೀಘ್ರದಲ್ಲೇ ಅಧಿಕೃತ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದೆ.

ಈ ಹೊಸ ಯೋಜನೆಯಡಿ, ಸಣ್ಣ ಸಿಲಿಂಡರ್‌ಗಳನ್ನು ಸಾಮಾನ್ಯ ಗ್ಯಾಸ್ ಸಂಪರ್ಕವಿಲ್ಲದೇ ಕೂಡ ಪಡೆಯಬಹುದಾಗಿದೆ. ಆಧಾರ್ ಕಾರ್ಡ್ ಆಧಾರಿತ KYC ಕಡ್ಡಾಯಗೊಳಿಸುವ ಸಾಧ್ಯತೆ ಇದ್ದು, ಇದರಿಂದ ಸಂಗ್ರಹಣೆ ಮತ್ತು ಅಕ್ರಮ ವಹಿವಾಟು ತಡೆಯಲು ಸಹಾಯವಾಗಲಿದೆ.

ಅಧಿಕೃತ ಗ್ಯಾಸ್ ಏಜೆನ್ಸಿಗಳ ಮೂಲಕ ಸಿಲಿಂಡರ್‌ಗಳನ್ನು ವಿತರಣೆ ಮಾಡಲಾಗುತ್ತಿದ್ದು, ಪ್ರತಿಯೊಂದು ಸಿಲಿಂಡರ್‌ಗೆ QR ಕೋಡ್ ಅಥವಾ ಯುನಿಕ್ ಐಡಿ ನೀಡುವ ಮೂಲಕ ಡಿಜಿಟಲ್ ಮೇಲ್ವಿಚಾರಣೆ ವ್ಯವಸ್ಥೆ ಜಾರಿಗೆ ತರುವ ಸಾಧ್ಯತೆ ಇದೆ.

ಸಿಲಿಂಡರ್ ಬೆಲೆ ಪ್ರತಿ ಕಿಲೋಗ್ರಾಂಗೆ ಸುಮಾರು 100 ಇರಬಹುದೆಂದು ಅಂದಾಜಿಸಲಾಗಿದೆ. ಪ್ರಸ್ತುತ ಮುಕ್ತ ಮಾರುಕಟ್ಟೆಯಲ್ಲಿ 200ರಿಂದ 250 ರೂವರೆಗೆ ವಸೂಲಿ ಮಾಡಲಾಗುತ್ತಿದೆ.

ಇದರಿಂದ ತಮ್ಮ ಗ್ರಾಮದಿಂದ ಹೊರಗೆ ವಾಸಿಸುವ ವಲಸೆ ಕಾರ್ಮಿಕರು, ಹಾಸ್ಟೆಲ್ ಅಥವಾ ಬಾಡಿಗೆ ಮನೆಗಳಲ್ಲಿ ಇರುವ ವಿದ್ಯಾರ್ಥಿಗಳು ಹಾಗೂ LPG ಸಂಪರ್ಕವಿಲ್ಲದವರಿಗೆ ಹೆಚ್ಚಿನ ಪ್ರಯೋಜನವಾಗಲಿದೆ.

ಅಕ್ರಮ ಗ್ಯಾಸ್ ರಿಫಿಲ್ಲಿಂಗ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಇದಕ್ಕಾಗಿ ವಿಶೇಷ ಅಭಿಯಾನವೂ ಹಮ್ಮಿಕೊಳ್ಳಲಾಗುವುದು ಎಂದು ಸಚಿವಾಲಯ ಮಾಹಿತಿ ನೀಡಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share