Friday, July 24, 2026
Join WhatsApp Group
HomeLocal Newsಕೂಲಿ ಕಾರ್ಮಿಕನ ಬಲಿ ಪಡೆದ ಹಾವು

ಕೂಲಿ ಕಾರ್ಮಿಕನ ಬಲಿ ಪಡೆದ ಹಾವು

ಭಟ್ಕಳ: ಹೂವಿನ ತೋಟದಲ್ಲಿ ಹೂ ಕೊಯ್ಯಲು ತೆರಳಿದ್ದ 50 ವರ್ಷದ ಕೂಲಿ ಕಾರ್ಮಿಕನೊಬ್ಬ ವಿಷಪೂರಿತ ಹಾವು ಕಚ್ಚಿ ಮೃತಪಟ್ಟಿರುವ ಘಟನೆ ಭಟ್ಕಳ ತಾಲೂಕಿನ ಮೂಡಶಿರಾಲಿ-ಬೆಂಗ್ರೆ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ರಾಮಚಂದ್ರ ಬಡಿಯಾ ನಾಯ್ಕ (50) ಎಂದು ಗುರುತಿಸಲಾಗಿದೆ.

ಜೂನ್ 29ರಂದು ಬೆಳಿಗ್ಗೆ 6ರಿಂದ 6.45ರ ನಡುವೆ ರಾಮಚಂದ್ರ ಅವರು ತಮ್ಮ ಹೂವಿನ ತೋಟದಲ್ಲಿ ಹೂ ಕೊಯ್ಯುತ್ತಿದ್ದ ವೇಳೆ ವಿಷಪೂರಿತ ಹಾವು ಕಚ್ಚಿದೆ. ಬಳಿಕ ಅವರಿಗೆ ಸ್ಥಳೀಯವಾಗಿ ನಾಟಿ ಔಷಧ ನೀಡಲಾಗಿತ್ತು. ಆದರೆ ಬೆಳಿಗ್ಗೆ ಸುಮಾರು 9 ಗಂಟೆ ವೇಳೆಗೆ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಅವರನ್ನು ತಕ್ಷಣ ಭಟ್ಕಳ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿದಾಗ, ಅವರು ಅದಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಈ ಕುರಿತು ಮೃತರ ಪುತ್ರ ಧನರಾಜ ರಾಮಚಂದ್ರ ನಾಯ್ಕ ಅವರು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share