Friday, July 24, 2026
Join WhatsApp Group
HomeStateಸಾಮಾಜಿಕ ನ್ಯಾಯ ಭಿಕ್ಷೆಯಲ್ಲ, ಅದು ಮಾನವ ಹಕ್ಕು

ಸಾಮಾಜಿಕ ನ್ಯಾಯ ಭಿಕ್ಷೆಯಲ್ಲ, ಅದು ಮಾನವ ಹಕ್ಕು

ಪಿರಿಯಾಪಟ್ಟಣ: ಸಾಮಾಜಿಕ ನ್ಯಾಯವು ಭಿಕ್ಷೆಯಲ್ಲ, ಅದು ಪ್ರತಿಯೊಬ್ಬರಿಗೂ ಸಲ್ಲುವ ಮೂಲಭೂತ ಮಾನವ ಹಕ್ಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ರಾಜು ಹೇಳಿದರು.

ತಾಲೂಕು ಕಾನೂನು ಸೇವಾ ಸಮಿತಿ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿ ನಿಲಯದಲ್ಲಿ ನಡೆದ ಸಾಮಾಜಿಕ ನ್ಯಾಯ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಅನೇಕ ಮಹನೀಯರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ್ದಾರೆ. 1948ರಲ್ಲಿ ಮಾನವ ಹಕ್ಕುಗಳ ಘೋಷಣೆ ಮೂಲಕ ಅಸಮಾನತೆ ನಿವಾರಣೆಗೆ ಕರೆ ನೀಡಿದ್ದು, 2009ರಿಂದ ಅಂತಾರಾಷ್ಟ್ರೀಯ ಸಾಮಾಜಿಕ ನ್ಯಾಯ ದಿನವನ್ನು ಆಚರಿಸಲಾಗುತ್ತಿದೆ ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಆರ್. ಯೋಗೇಶ್ ಮಾತನಾಡಿ, ಜಾತಿ, ಧರ್ಮ, ಲಿಂಗ ಆಧಾರಿತ ಅಸಮಾನತೆ ನಿವಾರಣೆಗಾಗಿ ಜಾಗೃತಿ ಅಗತ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಕೀಲರು ಉಪಸ್ಥಿತರಿದ್ದರು.

ವರದಿ: ಪ್ರಸನ್ನ ಕುಮಾರ್ ಬಿ.ಎಸ್.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share