Friday, July 24, 2026
Join WhatsApp Group
HomeLocal Newsಉತ್ತರ ಕನ್ನಡ ಪೊಲೀಸರಿಗೆ SOCO ಮೊಬೈಲ್ ಫೊರೆನ್ಸಿಕ್ ವಾಹನ

ಉತ್ತರ ಕನ್ನಡ ಪೊಲೀಸರಿಗೆ SOCO ಮೊಬೈಲ್ ಫೊರೆನ್ಸಿಕ್ ವಾಹನ

ಕಾರವಾರ: ಅಪರಾಧ ಪ್ರಕರಣಗಳ ತನಿಖೆಯನ್ನು ಮತ್ತಷ್ಟು ವೈಜ್ಞಾನಿಕ ಹಾಗೂ ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಗೆ ಹೊಸದಾಗಿ ಹಂಚಿಕೆಯಾಗಿರುವ SOCO (Scenes of Crime Officer) ಮೊಬೈಲ್ ಫೊರೆನ್ಸಿಕ್ ವಾಹನಕ್ಕೆ ಚಾಲನೆ ನೀಡಲಾಯಿತು.

ಕಾರವಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ಜಿಲ್ಲೆಯ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪರಮೇಶ್ವರ ಪ್ರಸನ್ನ ಬಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ವಾಹನವನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಿದರು.

ಅಪರಾಧ ನಡೆದ ಸ್ಥಳದಲ್ಲಿಯೇ ತ್ವರಿತವಾಗಿ ವೈಜ್ಞಾನಿಕ ಸಾಕ್ಷ್ಯಗಳನ್ನು ಸಂಗ್ರಹಿಸಲು, ಸಂರಕ್ಷಿಸಲು ಹಾಗೂ ಪ್ರಾಥಮಿಕ ಫೊರೆನ್ಸಿಕ್ ಪರಿಶೀಲನೆ ನಡೆಸಲು ಈ ಅತ್ಯಾಧುನಿಕ ಮೊಬೈಲ್ ಫೊರೆನ್ಸಿಕ್ ವಾಹನ ನೆರವಾಗಲಿದ್ದು, ತನಿಖೆಯ ಗುಣಮಟ್ಟ ಮತ್ತು ವೇಗ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುವ ನಿರೀಕ್ಷೆಯಿದೆ. ಈ ವಾಹನದ ಸೇರ್ಪಡೆಯಿಂದ ಜಿಲ್ಲೆಯ ಪೊಲೀಸ್ ಇಲಾಖೆಯ ತನಿಖಾ ಸಾಮರ್ಥ್ಯ ಮತ್ತಷ್ಟು ಬಲಗೊಳ್ಳಲಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share