Thursday, October 22, 2026
HomeLocal Newsಎಸ್.ಎಸ್.ಎಲ್.ಸಿ ಪರೀಕ್ಷೆ-2 ಪಾರದರ್ಶಕವಾಗಿರಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ-2 ಪಾರದರ್ಶಕವಾಗಿರಲಿ

ಕಾರವಾರ: ಮೇ 18ರಿಂದ 23ರವರೆಗೆ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-2ರ ಪರೀಕ್ಷಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ, ಪರೀಕ್ಷೆಗಳು ಅತ್ಯಂತ ಪಾರದರ್ಶಕ ಮತ್ತು ಶಿಸ್ತುಬದ್ಧವಾಗಿ ನಡೆಯಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚಿಸಿದರು.

ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-2 ನಡೆಸುವ ಕುರಿತ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಸ್.ಎಸ್.ಎಲ್.ಸಿ. ಪರೀಕ್ಷೆ-2ಕ್ಕೆ ಕಾರವಾರ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಯಿಂದ ಒಟ್ಟು 1,773 ವಿದ್ಯಾರ್ಥಿಗಳು ಹಾಜರಾಗಲಿದ್ದು, ಇದಕ್ಕಾಗಿ 12 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ತಿಳಿಸಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಬೇಕು ಮತ್ತು ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಬೇಕು ಎಂದರು.

ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ಸಾಗಾಟ ವಾಹನಗಳಿಗೆ ಪೊಲೀಸ್ ಭದ್ರತೆ ಒದಗಿಸಬೇಕು, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಲು ಬಸ್‌ಗಳ ಕೊರತೆಯಾಗಬಾರದು, ಹೆಸ್ಕಾಂ ನಿಂದ ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು ಎಂದರು.

ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಸಮನ್ವಯದಿಂದ ಕಾರ್ಯನಿರ್ವಹಿಸಿ, ಪರೀಕ್ಷೆಗಳು ದೋಷರಹಿತವಾಗಿ ನಡೆಯುವಂತೆ ತಮಗೆ ವಹಿಸಲಾಗಿರುವ ಕರ್ತವ್ಯ ನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಶಿಕ್ಷಣಾಧಿಕಾರಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯ ನೋಡೆಲ್ ಅಧಿಕಾರಿ ಡಾ. ಶುಭಾ ನಾಗೇಂದ್ರ ನಾಯಕ, ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ್ದ ಅಧಿಕಾರಿಗಳು, ವರ್ಚುವಲ್ ಮೂಲಕ ಎಲ್ಲಾ ತಾಲೂಕುಗಳ ತಹಸೀಲ್ದಾರ್‌ಗಳು ಮತ್ತು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ್ದ ಅಧಿಕಾರಿಗಳು ಹಾಜರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share