Saturday, May 30, 2026
HomeStateSSLC ಹಿಂದಿ ವಿಷಯಕ್ಕೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ!; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ

SSLC ಹಿಂದಿ ವಿಷಯಕ್ಕೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ!; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: 2025-26ನೇ ಸಾಲಿನ SSLC ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ನೀಡುವ ಬದಲು ಅಂಕ ನೀಡಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಮಹತ್ವದ ಆದೇಶ ನೀಡಿದೆ.

ಈ ಕುರಿತು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರಿದ್ದ ಹೈಕೋರ್ಟ್ ಪೀಠ, ಈಗಿನ ಸಾಲಿಗೆ ಗ್ರೇಡ್ ಪದ್ಧತಿ ಅನ್ವಯಿಸುವುದು ಸೂಕ್ತವಲ್ಲ ಎಂದು ಸ್ಪಷ್ಟಪಡಿಸಿದೆ.

ಹೀಗಾಗಿ ಹಿಂದಿ ವಿಷಯಕ್ಕೆ ಅಂಕ ನೀಡುವಂತೆ ಸರ್ಕಾರಕ್ಕೆ ಸೂಚಿಸಿದೆ.ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿಂದಿ ಸೇರಿದಂತೆ ತೃತೀಯ ಭಾಷೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿರುವ ಹಿನ್ನೆಲೆ ಒತ್ತಡ ಕಡಿಮೆ ಮಾಡಲು ಗ್ರೇಡ್ ಪದ್ಧತಿ ಜಾರಿಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಆದರೆ ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಪರೀಕ್ಷೆಗೆ ಸಂಬಂಧಿಸಿದ ನಿಯಮಗಳು ಮತ್ತು ಮೌಲ್ಯಮಾಪನ ವಿಧಾನಗಳನ್ನು ಅಧಿಸೂಚನೆ ಹೊರಡಿಸುವ ವೇಳೆಯಲ್ಲೇ ಸ್ಪಷ್ಟಪಡಿಸಬೇಕಿತ್ತು ಎಂದು ಪ್ರಶ್ನಿಸಿದೆ.

ಪರೀಕ್ಷೆಯ ನಂತರ ಹೊಸ ಪದ್ಧತಿಯನ್ನು ಜಾರಿಗೊಳಿಸುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದೆ. ಹೀಗಾಗಿ ಪ್ರಸಕ್ತ 2025-26ನೇ ಸಾಲಿನ SSLC ಪರೀಕ್ಷೆಗೆ ಹಿಂದಿ ಭಾಷೆಯಲ್ಲಿ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share