Friday, July 24, 2026
Join WhatsApp Group
HomeUncategorizedಚಾಣಕ್ಯ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳ ಗೌರವ

ಚಾಣಕ್ಯ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳ ಗೌರವ

ಶೇ.100 ಫಲಿತಾಂಶದೊಂದಿಗೆ ವಿದ್ಯಾರ್ಥಿಗಳ ಸಾಧನೆಗೆ ಗೌರವ

ಮೈಸೂರು: ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮದ ಚಾಣಕ್ಯ ವಿದ್ಯಾ ಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ಯದುರಾಜ್ ಮಾತನಾಡಿ, ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ತಂದುಕೊಟ್ಟಿರುವುದು ಹೆಮ್ಮೆಯ ವಿಚಾರವಾಗಿದೆ. ಇಂತಹ ಸಾಧನೆಗಳು ಇನ್ನಷ್ಟು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು. ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣ ಪಡೆದು ಸಮಾಜಕ್ಕೆ ಉಪಯುಕ್ತರಾಗಬೇಕು ಎಂದು ಹೇಳಿದರು.

ನಿರ್ದೇಶಕ ಜಗದೀಶ್ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ನಗರ ಮಟ್ಟದ ಶಿಕ್ಷಣ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಮುಖ್ಯ ಗುರಿಯಾಗಿದೆ. ಉತ್ತಮ ಶಿಕ್ಷಕರ ಮಾರ್ಗದರ್ಶನ, ಆಧುನಿಕ ಬೋಧನಾ ವಿಧಾನಗಳು ಹಾಗೂ ಶಿಸ್ತಿನ ವಾತಾವರಣದಿಂದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತಿದೆ ಎಂದರು.

ಮುಖ್ಯ ಶಿಕ್ಷಕ ಎಚ್.ಕೆ. ತಿಮ್ಮಯ್ಯ ಮಾತನಾಡಿ, ನಮ್ಮ ಸಂಸ್ಥೆಯು ಕಳೆದ 14 ವರ್ಷಗಳಿಂದ ಶೇಕಡಾ 100ರಷ್ಟು ಫಲಿತಾಂಶ ಸಾಧಿಸುತ್ತಿದ್ದು, ಇದು ಶಿಕ್ಷಕರ ಪರಿಶ್ರಮ ಹಾಗೂ ವಿದ್ಯಾರ್ಥಿಗಳ ಶ್ರದ್ಧೆಯ ಫಲವಾಗಿದೆ. ಮುಂದಿನ ದಿನಗಳಲ್ಲಿಯೂ ಉತ್ತಮ ಗುಣಮಟ್ಟದ ಶಿಕ್ಷಣದ ಮೂಲಕ ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿಗಳನ್ನು ರೂಪಿಸುವ ಕಾರ್ಯವನ್ನು ಮುಂದುವರಿಸುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಎ.ಕೆ. ಜಯಣ್ಣ, ನಿರ್ದೇಶಕರಾದ ಅನಿಲ್, ಹರೀಶ್, ಮಹೇಶ್, ಧನಂಜಯ್ ಹಾಗೂ ಶಿಕ್ಷಕರಾದ ಕುಮಾರಿ, ಶಿಲ್ಪ, ರಂಜಿತಾ, ಕಿರಣ್, ಶೃಂಗಾರ, ಸಹನಾ, ಚೇತನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share