Friday, July 24, 2026
Join WhatsApp Group
HomeUncategorizedಅರಣ್ಯಾಧಿಕಾರಿ ಸುನೀಲ್ ಹೊನ್ನಾವರರಿಗೆ ಸನ್ಮಾನ

ಅರಣ್ಯಾಧಿಕಾರಿ ಸುನೀಲ್ ಹೊನ್ನಾವರರಿಗೆ ಸನ್ಮಾನ

ಮುಂಡಗೋಡ: ಪರಿಸರ ಸಂರಕ್ಷಣೆ ಹಾಗೂ ಉರಗ ರಕ್ಷಣೆಯಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಗುರುತಿಸಿ ಮುಂಡಗೋಡ ತಾಲೂಕಿನ ಕಾತೂರು ವಲಯದ ಪಾಳಾ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸುನೀಲ್ ಹೊನ್ನಾವರ ಅವರನ್ನು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಮುಂಡಗೋಡ ತಾಲೂಕಿನ ಪಾಳ ಗ್ರಾಮದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ಪಾಲಕರ ಸಭೆ ಹಾಗೂ ವನಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಈ ಸನ್ಮಾನ ನೆರವೇರಿತು.ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿ ವತಿಯಿಂದ ಸುನೀಲ್ ಹೊನ್ನಾವರ ಅವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.

ಉರಗ ರಕ್ಷಣೆಯಲ್ಲಿ ಅವರು ಸಲ್ಲಿಸುತ್ತಿರುವ ಅವಿರತ ಸೇವೆಯನ್ನು ಶ್ಲಾಘಿಸಿದ ಆಡಳಿತ ಮಂಡಳಿಯವರು, ಇದೇ ರೀತಿಯ ಸಮಾಜಮುಖಿ ಕಾರ್ಯಗಳು ಮುಂದುವರಿಯಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share