Sunday, October 25, 2026
HomeLocal Newsಹೆದ್ದಾರಿ ತಡೆ ಶಾಂತಿಯುತವಾಗಿರಲಿ, ಹೋರಾಟ ಗಟ್ಟಿಯಾಗಿರಲಿ: ಸ್ವರ್ಣವಲ್ಲಿ ಶ್ರೀ

ಹೆದ್ದಾರಿ ತಡೆ ಶಾಂತಿಯುತವಾಗಿರಲಿ, ಹೋರಾಟ ಗಟ್ಟಿಯಾಗಿರಲಿ: ಸ್ವರ್ಣವಲ್ಲಿ ಶ್ರೀ

ಶಿರಸಿ: ಬೇಡ್ತಿ–ವರದಾ–ಅಘನಾಶಿನಿ ನದಿ ಜೋಡಣೆ ಯೋಜನೆ ವಿರೋಧಿಸಿ ನವೆಂಬರ್‌ 3ರಂದು ಯಲ್ಲಾಪುರದಲ್ಲಿ ನಡೆಯಲಿರುವ ರಾಷ್ಟ್ರೀಯ ಹೆದ್ದಾರಿ ತಡೆ ಹೋರಾಟ ಶಾಂತಿಯುತವಾಗಿ, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ನಡೆಯಬೇಕು.  ಅದೇ ವೇಳೆ ಹೋರಾಟದ ತೀವ್ರತೆ ಕಡಿಮೆಯಾಗದಂತೆ, ಗಟ್ಟಿ ಧ್ವನಿ ಮೊಳಗಿಸಬೇಕು ಎಂದು ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀಮದ್‌ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಕರೆ ನೀಡಿದರು.

ಶ್ರೀಮಠದಲ್ಲಿ ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆ ಸಂಚಾಲನಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ನದಿ ಜೋಡಣೆ ಯೋಜನೆಯ ಕುರಿತು ಜಿಲ್ಲೆಯ ಜನರ ಆತಂಕ ಹಾಗೂ ಪರಿಸರ ಸಂರಕ್ಷಣೆಯ ಮಹತ್ವವನ್ನು ಸರ್ಕಾರದ ಗಮನಕ್ಕೆ ತರಲು ಪ್ರಯತ್ನಗಳು ನಡೆಯಬೇಕು. ಈ ನಿಟ್ಟಿನಲ್ಲಿ ಕೊಳ್ಳ ಸಂರಕ್ಷಣಾ ಸಮಿತಿ ಮತ್ತು ಹೆದ್ದಾರಿ ತಡೆ ಸಂಚಾಲನಾ ಸಮಿತಿಯ ಪದಾಧಿಕಾರಿಗಳಿಗೆ ರಾಜ್ಯದ ಮುಖ್ಯಮಂತ್ರಿಗಳನ್ನು ಭೇಟಿ ಮಾಡುವ ಅವಕಾಶವನ್ನು ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಕಲ್ಪಿಸಿಕೊಡಬೇಕು ಎಂದು ಶ್ರೀಗಳು ಹೇಳಿದರು.

ನದಿಗಳ ಸಂರಕ್ಷಣೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹಿತದೃಷ್ಟಿಯಿಂದ ಜನಜಾಗೃತಿ ಮೂಡಿಸುವುದೂ ಅಗತ್ಯವಾಗಿದೆ. ಗಂಗಾಷ್ಟಮಿಯಿಂದ ಒಂದು ವಾರದವರೆಗೆ ಸಾಧ್ಯವಿರುವ ಎಲ್ಲೆಡೆ ಗಂಗಾರತಿ ಹಾಗೂ ನದಿಗಳ ಪೂಜೆಯನ್ನು ವ್ಯಾಪಕವಾಗಿ ಆಯೋಜಿಸಿ, ನದಿಗಳ ಉಳಿವಿಗಾಗಿ ಪ್ರಾರ್ಥನೆ ಸಲ್ಲಿಸುವ ಮೂಲಕ ಜನರಲ್ಲಿ ಪರಿಸರ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಶ್ರೀಮಠದ ಕಾರ್ಯಾಧ್ಯಕ್ಷ ಸತೀಶ ಹೆಗಡೆ ಹುಳಗೋಳ, ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ, ರಸ್ತೆ ತಡೆ ಸಂಚಾಲನಾ ಸಮಿತಿ ಅಧ್ಯಕ್ಷ ಎನ್.ಕೆ. ಭಟ್ಟ ಅಗ್ಗಾಶಿಕುಂಬ್ರಿ, ಪ್ರಧಾನ ಸಂಚಾಲಕ ಹರಿಪ್ರಕಾಶ ಕೋಣೆಮನೆ, ವಿಶ್ವನಾಥ ಶಿಗೇಹಳ್ಳಿ, ಎನ್.ಜಿ. ಹೆಗಡೆ ಭಟ್ರಕೇರಿ, ಅನಂತ ಹೆಗಡೆ ಹುಳಗೋಳ, ಎಂ.ಕೆ. ಭಟ್ ಯಡಳ್ಳಿ, ನರಸಿಂಹ ಸಾತೊಡ್ಡಿ, ವಿ.ಟಿ. ಹೆಗಡೆ ತೊಂಡೆಕೆರೆ, ವೆಂಕಟ್ರಮಣ ಭಟ್ ಕಿರಕುಂಭತ್ತಿ, ಕೇಶವ ಕೂರ್ಸೆ ಹಾಗೂ ನಾರಾಯಣ ಹೆಗಡೆ ಸುರಗಿಮನೆ ಉಪಸ್ಥಿತರಿದ್ದರು.

ಅನಂತ ಹೆಗಡೆ ಅಶೀಸರ ಪ್ರಾಸ್ತಾವಿಕವಾಗಿ ಮಾತನಾಡಿದರು. ನರಸಿಂಹ ಸಾತೊಡ್ಡಿ ವಂದಿಸಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad

Most Popular

Recent Comments

error: Content is protected !!
Share