Friday, October 23, 2026
HomeLocal Newsಮಾನಸಿಕ ಸಮಸ್ಯೆಯಾ, ಮನಬಿಚ್ಚಿ ಮಾತಾಡಿ!

ಮಾನಸಿಕ ಸಮಸ್ಯೆಯಾ, ಮನಬಿಚ್ಚಿ ಮಾತಾಡಿ!

ಕಾರವಾರ: ದೈನಂದಿನ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಮನಸ್ಸಿನಲ್ಲೇ ಮುಚ್ಚಿಟ್ಟುಕೊಂಡು ಒತ್ತಡಕ್ಕೆ ಒಳಗಾಗುವ ಬದಲು, ಕುಟುಂಬದ ಸದಸ್ಯರು, ನೆರೆಹೊರೆಯವರು ಹಾಗೂ ಸ್ನೇಹಿತರೊಂದಿಗೆ ಮನಬಿಚ್ಚಿ ಮಾತನಾಡಿ ಸಲಹೆ ಪಡೆಯುವ ಮೂಲಕ ಅನೇಕ ಮಾನಸಿಕ ಸಮಸ್ಯೆಗಳನ್ನು ನಿಭಾಯಿಸಲು ಸಾಧ್ಯ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಕವಿತಾ ಎಸ್. ಉಂಡೋಡಿ ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಪೊಲೀಸ್ ಇಲಾಖೆ, ಕಾರಾಗೃಹ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಉದ್ಯೋಗ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಎದುರಾಗುವ ಸಮಸ್ಯೆಗಳು ಹಾಗೂ ಭಾವನೆಗಳನ್ನು ಇತರರೊಂದಿಗೆ ಹಂಚಿಕೊಳ್ಳದೆ ಮನಸ್ಸಿನಲ್ಲೇ ಇಟ್ಟುಕೊಳ್ಳುವುದರಿಂದ ಮಾನಸಿಕ ಒತ್ತಡ ಹೆಚ್ಚಾಗುತ್ತದೆ. ಇತರರ ಜೀವನದೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುವುದು, ತಮ್ಮ ಸಾಮರ್ಥ್ಯ ಮತ್ತು ಕಾರ್ಯಕ್ಷಮತೆಯನ್ನು ಅರಿಯದೆ ಒತ್ತಡಕ್ಕೆ ಒಳಗಾಗುವುದು ಹಾಗೂ ದುಶ್ಚಟಗಳಿಗೆ ಬಲಿಯಾಗುವುದು ಮಾನಸಿಕ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ತಿಳಿಸಿದರು.

ನೆಮ್ಮದಿಯ ಜೀವನ ನಡೆಸಲು ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಬೇಕು. ಕುಟುಂಬದ ಸದಸ್ಯರು, ಸಂಬಂಧಿಕರು ಹಾಗೂ ಸ್ನೇಹಿತರೊಂದಿಗೆ ಪ್ರೀತಿ, ವಿಶ್ವಾಸದಿಂದ ಬೆರೆಯಬೇಕು. ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯ. ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಸೂಕ್ತ ದಿನಚರಿ ರೂಪಿಸಿಕೊಳ್ಳಬೇಕು. ಕುಟುಂಬದ ಸಮಸ್ಯೆಗಳನ್ನು ಪರಸ್ಪರ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಮೂಲಕ ನೆಮ್ಮದಿಯ ಜೀವನ ನಡೆಸಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿ ಡಾ. ಶಂಕರ್ ರಾವ್ ಮಾತನಾಡಿ, ಸಂಪಾದನೆ, ಗೌರವ ಹಾಗೂ ಘನತೆಯ ಬೆನ್ನತ್ತುವ ಧಾವಂತದಲ್ಲಿ ಅನೇಕರು ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಮಾನಸಿಕ ಆರೋಗ್ಯದಲ್ಲಿ ಏರುಪೇರಾದಾಗ ಎದುರಾಗಬಹುದಾದ ಸಮಸ್ಯೆಗಳನ್ನು ಅರಿತು ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಸಣ್ಣಪುಟ್ಟ ಸಮಸ್ಯೆಗಳಿಗೂ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆಯಂತಹ ತೀವ್ರ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಜೀವನದಲ್ಲಿ ಎದುರಾಗುವ ಒತ್ತಡಗಳನ್ನು ನಿಭಾಯಿಸುವುದು, ಸೋಲನ್ನು ಸ್ವೀಕರಿಸಿ ಅದನ್ನೇ ಗೆಲುವಿನ ಮೆಟ್ಟಿಲನ್ನಾಗಿ ಮಾಡಿಕೊಳ್ಳುವುದು ಹಾಗೂ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮನೋಭಾವ ಬೆಳೆಸಿಕೊಳ್ಳುವುದು ಅಗತ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ನಟರಾಜ್, ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ರಮೇಶ್ ರಾವ್, ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಹರ್ಷ ವೆಂಕಟೇಶ್, ಮಾನಸಿಕ ರೋಗ ತಜ್ಞ ಡಾ. ಸುಹಾಸ್ ಹಾಗೂ ಡಿಟಿಸಿ ಪ್ರಾಂಶುಪಾಲ ಡಾ. ಶಿವಾನಂದ ಸೇರಿದಂತೆ ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾನಸಿಕ ಆರೋಗ್ಯದ ಕುರಿತ ಜಾಗೃತಿ ಕರಪತ್ರ ಬಿಡುಗಡೆ ಮಾಡಲಾಯಿತು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸೋಮಶೇಖರ ಮುತ್ನಾಳ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ ಎಸ್. ಕನ್ನಕ್ಕನವರ ನಿರೂಪಿಸಿ, ವಂದಿಸಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share