ಭಟ್ಕಳ: ನಗರದ ಕಿದ್ವಾಯಿ ರಸ್ತೆಯಲ್ಲಿರುವ ಮನೆಯಲ್ಲಿ ಕಳ್ಳರು ಕಿಟಕಿ ಗ್ಲಾಸ್ ಒಡೆದು ಒಳನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಭಟ್ಕಳದ 1ನೇ ಕ್ರಾಸ್, ಕಿದ್ವಾಯಿ ರಸ್ತೆಯ ನಿವಾಸಿ ನಾಹಿದ್ ಅಕ್ತರ್ ಬಂಟವಾಲ ಅವರು ನೀಡಿದ ದೂರಿನ ಪ್ರಕಾರ, ಮೇ 8ರ ಮುಂಜಾನೆ ವೇಳೆಗೆ ಕಳ್ಳರು ಮನೆಯ ಹಿಂದಿನ ಬಾಗಿಲಿನ ಪಕ್ಕದ ಕಿಟಕಿ ಗ್ಲಾಸ್ ಒಡೆದು, ಚಿಲಕ ತೆಗೆದು ಮನೆ ಒಳಗೆ ಪ್ರವೇಶಿಸಿದ್ದಾರೆ.
ನಂತರ ಮನೆಯಲ್ಲಿದ್ದ ಸುಮಾರು 5.50 ಲಕ್ಷ ರೂ ಮೌಲ್ಯದ 55 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ 10 ಸಾವಿರ ರೂ ನಗದು ಹಣವನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತರ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.