Monday, September 7, 2026
Join WhatsApp Group
HomeLocal Newsಬೈಕ್‌ಗಳ ಮುಖಾಮುಖಿ ಡಿಕ್ಕಿ; ಇಬ್ಬರ ಸ್ಥಿತಿ ಗಂಭೀರ

ಬೈಕ್‌ಗಳ ಮುಖಾಮುಖಿ ಡಿಕ್ಕಿ; ಇಬ್ಬರ ಸ್ಥಿತಿ ಗಂಭೀರ

ದಾಂಡೇಲಿ: ಹಳಿಯಾಳ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದು, ಇನ್ನೂ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿರುವ ಘಟನೆ ವರದಿಯಾಗಿದೆ.

ಶುಕ್ರವಾರ ಬೆಳಗ್ಗೆ ಸುಮಾರು 6 ಗಂಟೆ ವೇಳೆಗೆ, ಎದುರು ದಿಕ್ಕಿನಿಂದ ಬರುತ್ತಿದ್ದ ಬುಲೆಟ್ ಹಾಗೂ ಪ್ಯಾಶನ್ ಪ್ರೊ ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಡಿಕ್ಕಿಯ ತೀವ್ರತೆಗೆ ಎರಡೂ ಬೈಕ್‌ಗಳ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ನಾಲ್ವರಿಗೆ ಸಣ್ಣ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು. ಗಂಭೀರವಾಗಿ ಗಾಯಗೊಂಡಿರುವ ಇಬ್ಬರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share