Monday, September 7, 2026
Join WhatsApp Group
HomeLocal Newsಗೋಕರ್ಣದಲ್ಲಿ ಗಾಂಜಾ ಅಮಲು; ಒಂದೇ ದಿನ ಇಬ್ಬರು ಪೊಲೀಸರ ಬಲೆಗೆ

ಗೋಕರ್ಣದಲ್ಲಿ ಗಾಂಜಾ ಅಮಲು; ಒಂದೇ ದಿನ ಇಬ್ಬರು ಪೊಲೀಸರ ಬಲೆಗೆ

ಗೋಕರ್ಣ: ಗಾಂಜಾ ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಮೊದಲ ಪ್ರಕರಣದಲ್ಲಿ, ಗೋಕರ್ಣ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಅನಿಲ್ ಬಿ.ಎಂ. ಅವರು ಸಿಬ್ಬಂದಿಗಳೊಂದಿಗೆ ಗಸ್ತು ಕರ್ತವ್ಯದಲ್ಲಿದ್ದ ವೇಳೆ, ಬಂಗ್ಲೇಗುಡ್ಡದ ಪ್ರವಾಸಿ ಮಂದಿರಕ್ಕೆ ತೆರಳುವ ಸಾರ್ವಜನಿಕ ರಸ್ತೆಯ ಸಮೀಪ ಸಣ್ಣಬಿಜ್ಜೂರು ನಿವಾಸಿ ರಾಘವೇಂದ್ರ ಹಮ್ಮು ಗೌಡ (24) ಅನುಮಾನಾಸ್ಪದ ಸ್ಥಿತಿಯಲ್ಲಿ ಕಂಡುಬಂದಿದ್ದಾನೆ.

ಗಾಂಜಾ ಅಥವಾ ಇತರೆ ಮಾದಕ ವಸ್ತು ಸೇವನೆ ಮಾಡಿರುವ ಶಂಕೆಯ ಹಿನ್ನೆಲೆಯಲ್ಲಿ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.

ಇನ್ನೊಂದು ಪ್ರಕರಣದಲ್ಲಿ, ಪುಣ್ಯಾಶ್ರಮದ ಮುಂದಿನ ಸಾರ್ವಜನಿಕ ರಸ್ತೆಯ ಬಳಿ ಗುಂಬ್ಳೆ-ಕೋಟಿತೀರ್ಥ ನಿವಾಸಿ ವಿಶ್ವನಾಥ ದೇವು ಗೌಡ (35) ಅನುಮಾನಾಸ್ಪದವಾಗಿ ಕಂಡುಬಂದಿದ್ದಾನೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆತ ಕೂಡ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಆತನ ವಿರುದ್ಧವೂ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share