ಕಾರವಾರ: ಕುಮಟಾ ಹಾಗೂ ಕಾರವಾರದಲ್ಲಿ ಗಾಂಜಾ ಸೇವನೆ ಮಾಡಿದ ಆರೋಪದಡಿ ಇಬ್ಬರ ವಿರುದ್ಧ ಪ್ರತ್ಯೇಕವಾಗಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿವೆ.
ಕುಮಟಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ, ಹಳಕಾರ ಗ್ರಾಮದ ಉರ್ದು ಶಾಲೆ ಸಮೀಪದ ನಿವಾಸಿ, ಎಲೆಕ್ಟ್ರಿಷಿಯನ್ ಉಮರ್ ಖಾನ್ ದಿಲಾವರ್ ಖಾನ್ (19) ವಿರುದ್ಧ ಪ್ರಕರಣ ದಾಖಲಾಗಿದೆ.
ಜುಲೈ 10ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಕುಮಟಾದ ಹಳಕಾರ ಕ್ರಾಸ್ ಸಮೀಪ ಸಾರ್ವಜನಿಕ ರಸ್ತೆಯಲ್ಲಿ ಗಾಂಜಾ ಸೇವನೆ ಮಾಡಿ ಅಮಲಿನಲ್ಲಿದ್ದ ವೇಳೆ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ವೈದ್ಯರ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.
ಇನ್ನೊಂದು ಪ್ರಕರಣ ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಹಬ್ಬುವಾಡದ ಗುತ್ತಿಂಬೀರ ದೇವಸ್ಥಾನದ ಸಮೀಪದ ನಿವಾಸಿ ಸಂಪತ್ ಮಾದಪ್ಪ ರೋಣದ (28) ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಜುಲೈ 9ರಂದು ಕಾರವಾರ ನಗರದ ಹನುಮಾನ್ ಮೂರ್ತಿ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಅಮಲಿನಲ್ಲಿದ್ದ ಆರೋಪದ ಮೇಲೆ ಸಂಪತ್‌ನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿತ್ತು. ವೈದ್ಯರ ವರದಿಯಲ್ಲಿ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟ ಬಳಿಕ ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.