Friday, July 24, 2026
Join WhatsApp Group
HomeNationalಅಮೆರಿಕದಲ್ಲಿ ಭಾರತವನ್ನು ಗೆಲ್ಲಿಸಿದ್ದು ಈ ವಕೀಲ!

ಅಮೆರಿಕದಲ್ಲಿ ಭಾರತವನ್ನು ಗೆಲ್ಲಿಸಿದ್ದು ಈ ವಕೀಲ!

ಅಮೆರಿಕದಲ್ಲಿ ವಿಧಿಸಲ್ಪಟ್ಟಿದ್ದ ಜಾಗತಿಕ ಸುಂಕಗಳ ವಿಚಾರ ಇದೀಗ ದೊಡ್ಡ ರಾಜಕೀಯ ಹಾಗೂ ಕಾನೂನು ಚರ್ಚೆಗೆ ಕಾರಣವಾಗಿದೆ. ವಿವಿಧ ದೇಶಗಳ ಸರಕುಗಳ ಮೇಲೆ ಆಗಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ವಿಧಿಸಿದ್ದ ಹೆಚ್ಚುವರಿ ಸುಂಕಗಳನ್ನು ಅಮೆರಿಕದ ಅಮೆರಿಕದ ಸುಪ್ರೀಂ ಕೋರ್ಟ್‌ ರದ್ದುಗೊಳಿಸಿರುವುದಾಗಿ ವರದಿಯಾಗಿದೆ.

ತುರ್ತು ಆರ್ಥಿಕ ಅಧಿಕಾರ ಕಾಯ್ದೆಯನ್ನು ಆಧಾರವನ್ನಾಗಿ ಮಾಡಿಕೊಂಡು ಭಾರತ ಸೇರಿದಂತೆ ಹಲವು ರಾಷ್ಟ್ರಗಳ ಮೇಲೆ ಜಾಗತಿಕ ಸುಂಕ ವಿಧಿಸಲಾಗಿತ್ತು. ಆದರೆ ಅಧ್ಯಕ್ಷರಿಗೆ ಕ್ಯಾಬಿನೆಟ್ ಅನುಮೋದನೆ ಇಲ್ಲದೆ ಏಕಪಕ್ಷೀಯವಾಗಿ ಇಂತಹ ವ್ಯಾಪಕ ಸುಂಕ ವಿಧಿಸುವ ಅಧಿಕಾರವಿಲ್ಲ ಎಂಬ ಅಭಿಪ್ರಾಯ ವ್ಯಕ್ತಗೊಂಡ ಹಿನ್ನೆಲೆಯಲ್ಲಿ ಈ ತೀರ್ಪು ಮಹತ್ವ ಪಡೆದಿದೆ.

ಈ ಪ್ರಕರಣದಲ್ಲಿ ಪ್ರಮುಖವಾಗಿ ವಾದ ಮಂಡಿಸಿದವರು ಭಾರತೀಯ ಮೂಲದ ಅಮೆರಿಕನ್ ವಕೀಲ ನೀಲ್‌ ಕಟ್ಯಾಲ್. ಸಣ್ಣ ಉದ್ಯಮಿಗಳ ಪರವಾಗಿ ನ್ಯಾಯಾಲಯದಲ್ಲಿ ಹಾಜರಾಗಿ, ಹೆಚ್ಚುವರಿ ಸುಂಕಗಳು ಸಂವಿಧಾನಾತ್ಮಕ ಮಿತಿಗಳನ್ನು ಮೀರಿ ವಿಧಿಸಲ್ಪಟ್ಟಿವೆ ಎಂದು ವಾದಿಸಿದ್ದರು.

ನೀಲ ಕತ್ಯಾಲ್ ಭಾರತೀಯ ಮೂಲದ ವ್ಯಕ್ತಿ ಹಾಗೂ ಪ್ರಸಿದ್ಧ ಅಮೆರಿಕನ್ ವಕೀಲ. ಇವರ ತಂದೆ-ತಾಯಿ ಭಾರತೀಯ ಮೂಲದವರು. ತಾಯಿ ಪ್ರತಿಭಾ ಮಕ್ಕಳ ತಜ್ಞೆಯಾಗಿದ್ದು, ತಂದೆ ಸುಂದರ್ ಎಂಜಿನಿಯರ್ ಆಗಿದ್ದರು. 1970ರ ಮಾರ್ಚ್​​ 12 ರಂದು ಷಿಕಾಗೋದಲ್ಲಿ ಜನಿಸಿದ ಕತ್ಯಾಲ್ ಕಾನೂನು ಪದವಿ ಪಡೆದಿದ್ದಾರೆ. ಕತ್ಯಾಲ್ ಅಮೆರಿಕ ನ್ಯಾಯಾಂಗ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದು, ಸಾಲಿಸಿಟರ್ ಜನರಲ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.

ಪ್ರಸ್ತುತ ಜಾರ್ಜ್‌ಟೌನ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. 50ಕ್ಕೂ ಪ್ರಮುಖ ಹೆಚ್ಚು ಪ್ರಕರಣಗಳ ಬಗ್ಗೆ ಸುಪ್ರೀಂ ಕೋರ್ಟ್​​ನಲ್ಲಿ ವಾದಿಸಿದ ಅನುಭವ ಹೊಂದಿದ್ದಾರೆ. ಸದ್ಯ ಕತ್ಯಾಲ್ ಅವರು ಹೆಚ್ಚುವರಿ ಸುಂಕ ವಿಧಿಸಿದ ಪ್ರಕರಣದಲ್ಲಿ ಸಣ್ಣ ಉದ್ಯಮಿಗಳ ಪರವಾಗಿ ವಾದ ಮಂಡಿಸಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share