Thursday, October 22, 2026
HomeLocal Newsನೀವೂ ಆಗಬಹುದು ʻಶ್ರೇಷ್ಠ ತೋಟಗಾರಿಕಾ ರೈತʼ!

ನೀವೂ ಆಗಬಹುದು ʻಶ್ರೇಷ್ಠ ತೋಟಗಾರಿಕಾ ರೈತʼ!

ಕಾರವಾರ: ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ನೀಡಲಾಗುವ ಶ್ರೇಷ್ಠ ತೋಟಗಾರಿಕಾ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿಗೆ ಉತ್ತರ ಕನ್ನಡ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಶ್ವವಿದ್ಯಾಲಯದ ವತಿಯಿಂದ ಡಿಸೆಂಬರ್ 23ರಿಂದ 25ರವರೆಗೆ ಬಾಗಲಕೋಟೆಯಲ್ಲಿ ‘ಹವಾಮಾನ ವೈಪರೀತ್ಯದಲ್ಲಿ ಸುಸ್ಥಿರ ತೋಟಗಾರಿಕೆ’ ಎಂಬ ಧ್ಯೇಯದೊಂದಿಗೆ ತೋಟಗಾರಿಕೆ ಮೇಳ ಆಯೋಜಿಸಲಾಗಿದೆ. ಈ ಮೇಳದಲ್ಲಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ರಾಜ್ಯದ 25 ಜಿಲ್ಲೆಗಳಿಂದ ತಲಾ ಒಬ್ಬ ಶ್ರೇಷ್ಠ ತೋಟಗಾರಿಕಾ ರೈತ ಅಥವಾ ರೈತ ಮಹಿಳೆಯನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.

ಆಸಕ್ತ ರೈತರು ಅರ್ಜಿ ನಮೂನೆಯನ್ನು ಶಿರಸಿಯ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಕಚೇರಿ ಅಥವಾ www.uhsbagalkot.karnataka.gov.in ಮೂಲಕ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಡೀನ್, ತೋಟಗಾರಿಕೆ ಮಹಾವಿದ್ಯಾಲಯ, ಬನವಾಸಿ ರಸ್ತೆ, ಶಿರಸಿ ಇವರಿಗೆ ಅಕ್ಟೋಬರ್‌ 30ರ ಒಳಗೆ ಅರ್ಜಿ ಸಲ್ಲಿಸಬೇಕು.

ಅರ್ಜಿದಾರರು ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದ ಯಾವುದೇ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಅಥವಾ ಎಸಿಎಆರ್ ಪ್ರಶಸ್ತಿಯನ್ನು ತಮ್ಮ ಹೆಸರಿನಲ್ಲಿ ಅಥವಾ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ಪಡೆದಿರಬಾರದು.

ನಿಗದಿತ ಅರ್ಜಿ ನಮೂನೆಯಲ್ಲಿ ಸಂಪೂರ್ಣ ಮಾಹಿತಿಯನ್ನು ಒದಗಿಸಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಆಯ್ಕೆ ಸಮಿತಿ ಪರಿಶೀಲಿಸಿ, ಕಿರುಪಟ್ಟಿಯಲ್ಲಿರುವ ರೈತರ ತೋಟಗಳಿಗೆ ಮಾತ್ರ ಕ್ಷೇತ್ರ ವೀಕ್ಷಣೆ ನಡೆಸಲಿದೆ. ಆಯ್ಕೆಯು ವಿಶ್ವವಿದ್ಯಾಲಯದ ನಿಯಮಗಳು ಹಾಗೂ ಸಮಿತಿಯ ನಿರ್ಧಾರಕ್ಕೆ ಒಳಪಟ್ಟಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ. ವೆಂಕಟೇಶಲು (9480696381), ಡಾ. ದೀಪಾ ತೇರದಾಳ (7899285785), ಶ್ರೀಪಾದ ವಿ. (9448344103), ಎಂ.ಎ. ವಾಸೀಮ್ (7259793847), ಡಾ. ಶಶಿಧರ ದೊಡಮನಿ (7795674153) ಅಥವಾ ಸಹಾಯಕ ಆಡಳಿತಾಧಿಕಾರಿ ಪಿ.ಬಿ. ದೇಸೂರ (8884612692) ಅವರನ್ನು ಸಂಪರ್ಕಿಸಬಹುದು ಎಂದು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share