ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲೊಂದು ಸಿಹಿಸುದ್ದಿ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕಾರವಾರ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 78 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನೇಮಕಾತಿಯಲ್ಲಿ 13 ಆದೇಶ-ಜಾರಿಕಾರ (Process Server) ಹಾಗೂ 65 ಜವಾನ (Peon) ಹುದ್ದೆಗಳು ಸೇರಿವೆ.
ಅರ್ಹ ಅಭ್ಯರ್ಥಿಗಳು ಆಗಸ್ಟ್ 17ರಿಂದ ಸೆಪ್ಟೆಂಬರ್ 16ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ನ ನೇಮಕಾತಿ ವಿಭಾಗದಲ್ಲಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವರ್ಗೀಕರಣ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಮೀಸಲಾತಿ, ಪರೀಕ್ಷಾ ವಿಧಾನ ಹಾಗೂ ಇತರ ಮಾಹಿತಿಗಾಗಿ ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://uttarakannada.dcourts.gov.in/notice-category/recruitments/ ಅಥವಾ https://uttarakannada.dcourts.gov.in/online-recruitment/ ಲಿಂಕ್ಪರಿಶೀಲಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.