Friday, July 24, 2026
Join WhatsApp Group
HomeLocal Newsಆರೆಂಜ್ ಅಲರ್ಟ್: ಜುಲೈ 9ರವರೆಗೆ ಎಚ್ಚರ

ಆರೆಂಜ್ ಅಲರ್ಟ್: ಜುಲೈ 9ರವರೆಗೆ ಎಚ್ಚರ

ಕಾರವಾರ: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 5ರ ಮಧ್ಯಾಹ್ನ 1 ಗಂಟೆಯಿಂದ ಜುಲೈ 9ರ ಬೆಳಿಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

 ಈ ಅವಧಿಯಲ್ಲಿ 40–50 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಸಾರ್ವಜನಿಕರಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.

ಜಿಲ್ಲೆಯಲ್ಲಿ ಮುಂಗಾರು ಪೂರ್ವಸಿದ್ಧತೆಗಳನ್ನು ಈಗಾಗಲೇ ಕೈಗೊಳ್ಳಲಾಗಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿ 24×7 ತುರ್ತು ಕಾರ್ಯಾಚರಣೆ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಸಾರ್ವಜನಿಕರು ಹವಾಮಾನ ಹಾಗೂ ತುರ್ತು ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಅಧಿಕೃತ ಸಾಮಾಜಿಕ ಜಾಲತಾಣಗಳು ಮತ್ತು ಸ್ಥಳೀಯ ಸುದ್ದಿಮಾಧ್ಯಮಗಳನ್ನು ಗಮನಿಸುವಂತೆ ತಿಳಿಸಲಾಗಿದೆ.

ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳಬಾರದು. ಈಗಾಗಲೇ ಸಮುದ್ರದಲ್ಲಿರುವವರು ಕೂಡಲೇ ಸುರಕ್ಷಿತ ಬಂದರುಗಳಿಗೆ ಮರಳುವಂತೆ ಸೂಚಿಸಲಾಗಿದೆ.

ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರ ತೀರ, ನದಿ ತೀರ, ಜಲಾಶಯಗಳು ಮತ್ತು ಅಪಾಯ ಸಂಭವಿಸಬಹುದಾದ ಪ್ರದೇಶಗಳಿಗೆ ಹೋಗುವುದನ್ನು ಕಟ್ಟುನಿಟ್ಟಾಗಿ ತಪ್ಪಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

ಬಿರುಗಾಳಿಯ ಸಂದರ್ಭದಲ್ಲಿ ಮರಗಳು, ಮರದ ಕೊಂಬೆಗಳು, ವಿದ್ಯುತ್ ಕಂಬಗಳು, ಜಾಹೀರಾತು ಫಲಕಗಳು, ನಿರ್ಮಾಣ ಹಂತದ ಕಟ್ಟಡಗಳು ಹಾಗೂ ತಾತ್ಕಾಲಿಕ ಶೆಡ್‌ಗಳ ಬಳಿ ನಿಲ್ಲಬಾರದು ಅಥವಾ ವಾಹನಗಳನ್ನು ನಿಲ್ಲಿಸಬಾರದು ಎಂದು ಸೂಚಿಸಲಾಗಿದೆ.

ಅಪಾಯಕಾರಿ ಮರಗಳು ಅಥವಾ ಶಿಥಿಲಾವಸ್ಥೆಯ ಕಟ್ಟಡಗಳ ಸಮೀಪದ ಕೊಠಡಿಗಳಲ್ಲಿ ಶಾಲೆ ಹಾಗೂ ಅಂಗನವಾಡಿ ತರಗತಿಗಳನ್ನು ನಡೆಸದಂತೆ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸಾರ್ವಜನಿಕರು ಅಗತ್ಯವಿಲ್ಲದಿದ್ದರೆ ಮನೆಯಿಂದ ಹೊರಗೆ ಸಂಚರಿಸುವುದನ್ನು ಸಾಧ್ಯವಾದಷ್ಟು ತಪ್ಪಿಸಿ, ಅತ್ಯಾವಶ್ಯಕ ಸಂದರ್ಭಗಳಲ್ಲಿ ಮಾತ್ರ ಹೊರಗೆ ತೆರಳಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share