Monday, September 7, 2026
Join WhatsApp Group
HomeLocal Newsಜಿಲ್ಲೆಯಲ್ಲಿ 79 ಹೊಸ ಮತಗಟ್ಟೆಗಳ ಸೇರ್ಪಡೆ

ಜಿಲ್ಲೆಯಲ್ಲಿ 79 ಹೊಸ ಮತಗಟ್ಟೆಗಳ ಸೇರ್ಪಡೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಸಂಖ್ಯೆಯ ಹೆಚ್ಚಳ ಹಿನ್ನೆಲೆಯಲ್ಲಿ 79 ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದ್ದು, ಇದರಿಂದ ಜಿಲ್ಲೆಯ ಒಟ್ಟು ಮತಗಟ್ಟೆಗಳ ಸಂಖ್ಯೆ 1,445ರಿಂದ 1,524ಕ್ಕೆ ಏರಿಕೆಯಾಗಲಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಅವರು, ಕೆಲವು ಮತಗಟ್ಟೆಗಳಲ್ಲಿ 1,200ಕ್ಕೂ ಅಧಿಕ ಮತದಾರರು ಇರುವ ಕಾರಣ ಹೊಸ ಮತಗಟ್ಟೆಗಳ ರಚನೆ ಅಗತ್ಯವಾಗಿದೆ ಎಂದು ವಿವರಿಸಿದರು.

ಜಿಲ್ಲೆಯ ಹಳಿಯಾಳದಲ್ಲಿ 13, ಕಾರವಾರದಲ್ಲಿ 8, ಕುಮಟಾದಲ್ಲಿ 11, ಭಟ್ಕಳದಲ್ಲಿ 22, ಶಿರಸಿಯಲ್ಲಿ 15 ಹಾಗೂ ಯಲ್ಲಾಪುರದಲ್ಲಿ 10 ಮತಗಟ್ಟೆಗಳು 1,200ಕ್ಕೂ ಹೆಚ್ಚು ಮತದಾರರನ್ನು ಹೊಂದಿದ್ದು, ಈ ವಿಧಾನಸಭಾ ಕ್ಷೇತ್ರಗಳಲ್ಲಿ ಹೊಸ ಮತಗಟ್ಟೆಗಳನ್ನು ಸೇರ್ಪಡೆಗೊಳಿಸುವ ಪ್ರಸ್ತಾವನೆ ಮಾಡಲಾಗಿದೆ.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತಂತೆ ಜಿಲ್ಲೆಯಲ್ಲಿ ಇದುವರೆಗೆ ಸಾಧಿಸಿರುವ ಪ್ರಗತಿಯ ಮಾಹಿತಿಯನ್ನು ರಾಜಕೀಯ ಪಕ್ಷಗಳಿಗೆ ವಿತರಿಸಿದ ಜಿಲ್ಲಾಧಿಕಾರಿಗಳು, ಯಾವುದೇ ಗೊಂದಲಗಳಿದ್ದಲ್ಲಿ ತಮ್ಮ ಪಕ್ಷಗಳ ಬೂತ್ ಲೆವೆಲ್ ಏಜೆಂಟ್‌ಗಳ (BLA) ಮೂಲಕ ಮತ್ತೊಮ್ಮೆ ಪರಿಶೀಲಿಸಿ ಮಾಹಿತಿ ದೃಢಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂಜಯ್ ಸಾಳುಂಕೆ, ಕಾಂಗ್ರೆಸ್ ಉಪಾಧ್ಯಕ್ಷ ಬಾಬು ಶೇಖ್, ಪಕ್ಷದ ಪ್ರತಿನಿಧಿ ಸಯ್ಯದ್ ಅಶ್ರಫ್ ಹಾಗೂ ಜಿಲ್ಲಾ ಚುನಾವಣಾ ಶಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share