Friday, October 23, 2026
HomeLocal Newsಹೈಜಂಪ್‌ನಲ್ಲಿ ರಾಜ್ಯಕ್ಕೆ ಪ್ರಥಮ; ರಾಷ್ಟ್ರೀಯ ಕ್ರೀಡಾಕೂಟಕ್ಕೆ ವೈಷ್ಣವಿ ಆಯ್ಕೆ

ಹೈಜಂಪ್‌ನಲ್ಲಿ ರಾಜ್ಯಕ್ಕೆ ಪ್ರಥಮ; ರಾಷ್ಟ್ರೀಯ ಕ್ರೀಡಾಕೂಟಕ್ಕೆ ವೈಷ್ಣವಿ ಆಯ್ಕೆ

ಕಾರವಾರ: ಹೈಜಂಪ್‌ನಲ್ಲಿ ರಾಜ್ಯಮಟ್ಟದ ಪ್ರಥಮ ಸ್ಥಾನ ಗಳಿಸಿದ ಕಾರವಾರ ಕ್ರೀಡಾ ವಸತಿ ನಿಲಯದ ಕ್ರೀಡಾಪಟು ವೈಷ್ಣವಿ ಪಿ. ಘಾಡೆಕರ್ ಅವರು ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ತುಮಕೂರು ಜಿಲ್ಲಾ ಕ್ರೀಡಾಂಗಣದಲ್ಲಿ ಅಕ್ಟೋಬರ್ 5ರಿಂದ 7ರವರೆಗೆ ನಡೆದ ಕರ್ನಾಟಕ ರಾಜ್ಯ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 16 ವರ್ಷದೊಳಗಿನ ಬಾಲಕಿಯರ ವಿಭಾಗದ ಹೈಜಂಪ್ ಸ್ಪರ್ಧೆಯಲ್ಲಿ ವೈಷ್ಣವಿ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ಚೆನ್ನೈನಲ್ಲಿ ನಡೆಯಲಿರುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಅವಕಾಶ ಗಳಿಸಿದ್ದಾರೆ.

ವೈಷ್ಣವಿ ಅವರ ಸಾಧನೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯಕ ಹಾಗೂ ಅಥ್ಲೆಟಿಕ್ಸ್ ತರಬೇತುದಾರ ಶಿವಾನಂದ ನಾಯ್ಕ ಅಭಿನಂದನೆ ಸಲ್ಲಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share