Thursday, July 23, 2026
Join WhatsApp Group
HomeAgricultureಬರದ ನಡುವೆಯೂ ಕೆರೆಗಳಿಗೆ ಜೀವಜಲ

ಬರದ ನಡುವೆಯೂ ಕೆರೆಗಳಿಗೆ ಜೀವಜಲ

ವರದಾ ನದಿಯಿಂದ ನೀರು ತುಂಬಿಸುವ ಕಾರ್ಯಕ್ಕೆ ವೇಗ

ಬನವಾಸಿ: ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆಯಿಂದ ನೀರಿನ ಅಭಾವದ ಆತಂಕ ಎದುರಾಗಿರುವ ನಡುವೆಯೇ, ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ ವರದಾ ನದಿಯಿಂದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ವೇಗ ನೀಡಲಾಗಿದೆ.

ಶಾಸಕ ಶಿವರಾಮ ಹೆಬ್ಬಾರ್ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ಕಾರ್ಯದ ಮೂಲಕ ಲಭ್ಯವಿರುವ ಅಲ್ಪ ಪ್ರಮಾಣದ ನೀರನ್ನೇ ಸಮರ್ಪಕವಾಗಿ ಬಳಸಿಕೊಂಡು ಕೆರೆಗಳನ್ನು ತುಂಬಿಸಲಾಗುತ್ತಿದೆ. ವಿದ್ಯುತ್‌ ಸಮಸ್ಯೆಯ ನಡುವೆಯೂ ನೀರು ಹರಿಸುವ ಕಾರ್ಯ ಮುಂದುವರಿದಿದ್ದು, ರೈತರಲ್ಲಿ ಆಶಾಭಾವನೆ ಮೂಡಿಸಿದೆ.

ಕೆರೆಗಳು ತುಂಬುವುದರಿಂದ ಅಂತರ್ಜಲ ಮಟ್ಟ ಹೆಚ್ಚುವ ನಿರೀಕ್ಷೆ ಇದ್ದು, ಮುಂಬರುವ ಕೃಷಿ ಚಟುವಟಿಕೆಗಳಿಗೆ ಇದು ನೆರವಾಗಲಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ನೀರಿನ ಕೊರತೆಯ ಪರಿಸ್ಥಿತಿಯಲ್ಲಿ ಕೆರೆಗಳನ್ನು ಜೀವಂತವಾಗಿಡುವ ಈ ಪ್ರಯತ್ನದಿಂದ ಗ್ರಾಮೀಣ ಭಾಗದಲ್ಲಿ ನೀರಿನ ಸಂರಕ್ಷಣೆಗೂ ಉತ್ತೇಜನ ಸಿಗುವ ನಿರೀಕ್ಷೆಯಿದೆ.

ಈ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ರೈತರ ಹಿತದೃಷ್ಟಿಯಿಂದ ಕೈಗೊಂಡಿರುವ ಕ್ರಮವನ್ನು ಹಲವರು ಶ್ಲಾಘಿಸಿದ್ದಾರೆ. ಕೆಲವು ಸ್ಥಳೀಯರು ಶಾಸಕ ಶಿವರಾಮ ಹೆಬ್ಬಾರ್ ಅವರನ್ನು “ಬನವಾಸಿಯ ಭಗೀರಥ” ಹಾಗೂ “ರೈತ ನಾಯಕ” ಎಂದು ಬಣ್ಣಿಸಿ, ಈ ಯೋಜನೆಯು ಸಾವಿರಾರು ರೈತರ ಕೃಷಿ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಯೋಜನೆಯಿಂದ ಕೆರೆಗಳ ಪುನರುಜ್ಜೀವನದ ಜೊತೆಗೆ ನೀರಿನ ಸಮರ್ಪಕ ಬಳಕೆ ಮತ್ತು ಅಂತರ್ಜಲ ವೃದ್ಧಿಗೂ ಸಹಕಾರಿಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share