Friday, July 24, 2026
Join WhatsApp Group
HomeLocal Newsಹುಲಗಾನ ಶ್ರೀಲಕ್ಷ್ಮೀನರಸಿಂಹ ದೇವಾಲಯದಲ್ಲಿ ವರ್ಧಂತ್ಯುತ್ಸವ

ಹುಲಗಾನ ಶ್ರೀಲಕ್ಷ್ಮೀನರಸಿಂಹ ದೇವಾಲಯದಲ್ಲಿ ವರ್ಧಂತ್ಯುತ್ಸವ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಹುಲಗಾನ ಶ್ರೀಲಕ್ಷ್ಮೀನರಸಿಂಹ ದೇವಾಲಯದಲ್ಲಿ ವರ್ಧಂತಿ ಉತ್ಸವ ಸೋಮವಾರ ಭಕ್ತಿಭಾವದಿಂದ ನೆರವೇರಿತು.

ದೇವರ ಸನ್ನಿಧಿಯಲ್ಲಿ ಶ್ರೀಲಕ್ಷ್ಮೀನರಸಿಂಹ ಜಪ, ಶ್ರೀಲಕ್ಷ್ಮೀನರಸಿಂಹ ಮೂಲಮಂತ್ರ ಹವನ, ಪುರುಷಸೂಕ್ತ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮಾತೆಯರಿಂದ ಭಗವದ್ಗೀತಾ ಪಠಣ, ವಿಷ್ಣು ಸಹಸ್ರನಾಮ ಹಾಗೂ ಶಾಂಕರ ಸ್ತೋತ್ರಪಠಣವೂ ಜರುಗಿತು.

ನಂತರ ನಡೆದ ತಾಳಮದ್ದಲೆ ಹಾಗೂ ಯಕ್ಷಗಾನ ಪ್ರದರ್ಶನ ಭಕ್ತರನ್ನು ರಂಜಿಸಿತು.

ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಜಿ.ಎಸ್. ಭಟ್ಟ, ಮೊಕ್ತೇಸರ ವೆಂಕಟ್ರಮಣ ಹೆಗಡೆ, ಎಸ್.ವಿ. ಹುಲಗಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share