Friday, October 23, 2026
HomeLocal Newsಸಮಾಜದ ಧ್ವನಿ ಬಲಪಡಿಸಲು ಮಹಾಸಭೆಯ ಹೊಸ ಹೆಜ್ಜೆ

ಸಮಾಜದ ಧ್ವನಿ ಬಲಪಡಿಸಲು ಮಹಾಸಭೆಯ ಹೊಸ ಹೆಜ್ಜೆ

ಯಲ್ಲಾಪುರ: ಸಂಘಟನೆ ಬಲವಾದರೆ ಸಮಾಜದ ಧ್ವನಿಯೂ ಬಲವಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಸಮಾಜ ಸಂಘಟನೆ, ಯುವ ಸಬಲೀಕರಣ, ಮಹಿಳಾ ಸಬಲೀಕರಣ, ಕೃಷಿ, ಸಹಕಾರ, ಉದ್ಯೋಗ, ಕೌಶಲ್ಯಾಭಿವೃದ್ಧಿ ಹಾಗೂ ಸಮಾಜಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಯುವ, ಮಹಿಳಾ ಹಾಗೂ ರೈತ-ಸಹಕಾರಿ ಘಟಕಗಳ ರಚನೆಗೆ ಚಾಲನೆ ನೀಡಲಾಗುತ್ತಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಲಿಂಗಯ್ಯ ಅಲ್ಲಯ್ಯನವರಮಠ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಯುವ, ಮಹಿಳಾ ಹಾಗೂ ರೈತ-ಸಹಕಾರಿ ಘಟಕಗಳ ರಚನೆ ಮತ್ತು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಆರಂಭಗೊಂಡಿದೆ. ಈಗಾಗಲೇ ಜಿಲ್ಲಾ ಉಪಾಧ್ಯಕ್ಷರು ಹಾಗೂ ಸಂಬಂಧಪಟ್ಟ ತಾಲೂಕು ಘಟಕಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು ಸ್ಥಳೀಯವಾಗಿ ಅರ್ಹ, ಕ್ರಿಯಾಶೀಲ ಹಾಗೂ ಸಮಾಜಸೇವೆಯಲ್ಲಿ ಆಸಕ್ತಿ ಹೊಂದಿರುವ ಸಮಾಜಬಾಂಧವರನ್ನು ಗುರುತಿಸಿ ಶಿಫಾರಸು ಮಾಡುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಯುವ ಘಟಕಕ್ಕೆ 40 ವರ್ಷಗಳೊಳಗಿನ ಆಸಕ್ತ ಹಾಗೂ ಕ್ರಿಯಾಶೀಲ ಯುವ ಸಮಾಜಬಾಂಧವರು, ಮಹಿಳಾ ಘಟಕಕ್ಕೆ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಆಸಕ್ತಿ ಹೊಂದಿರುವ ಮಹಿಳೆಯರು ಹಾಗೂ ರೈತ-ಸಹಕಾರಿ ಘಟಕಕ್ಕೆ ಕೃಷಿ, ರೈತ ಸಂಘಟನೆ, ಸಹಕಾರ ಮತ್ತು ಗ್ರಾಮೀಣ ಆರ್ಥಿಕ ಚಟುವಟಿಕೆಗಳಲ್ಲಿ ಆಸಕ್ತಿ ಅಥವಾ ಅನುಭವ ಹೊಂದಿರುವ ಸಮಾಜಬಾಂಧವರು ಅರ್ಜಿ ಸಲ್ಲಿಸಬಹುದು.

ಆಸಕ್ತರು ತಮ್ಮ ತಾಲೂಕು ಘಟಕದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಅಥವಾ ಸಂಬಂಧಪಟ್ಟ ಪದಾಧಿಕಾರಿಗಳನ್ನು ಸಂಪರ್ಕಿಸಿ ಸೆ.26ರೊಳಗೆ ತಮ್ಮ ಆಸಕ್ತಿಯನ್ನು ತಿಳಿಸಬೇಕು. ಅಭ್ಯರ್ಥಿಗಳ ಅರ್ಹತೆ, ಕ್ರಿಯಾಶೀಲತೆ, ಜವಾಬ್ದಾರಿ ವಹಿಸುವ ಸಿದ್ಧತೆ ಹಾಗೂ ಸ್ಥಳೀಯ ಸಂಘಟನಾ ಅಗತ್ಯಗಳನ್ನು ಪರಿಗಣಿಸಿ ಶಿಫಾರಸು ಹಾಗೂ ನಾಮನಿರ್ದೇಶನ ಪ್ರಕ್ರಿಯೆ ನಡೆಯಲಿದೆ ಎಂದು ಶಿವಲಿಂಗಯ್ಯ ಅಲ್ಲಯ್ಯನವರಮಠ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share