Friday, October 23, 2026
HomeLocal Newsಕಬಡ್ಡಿ ಅಂಗಳದಲ್ಲಿ ವಿಠ್ಠು ಶೆಳಕೆಗೆ ಹೊಸ ಜವಾಬ್ದಾರಿ

ಕಬಡ್ಡಿ ಅಂಗಳದಲ್ಲಿ ವಿಠ್ಠು ಶೆಳಕೆಗೆ ಹೊಸ ಜವಾಬ್ದಾರಿ

ಯಲ್ಲಾಪುರ: ವಿದ್ಯಾರ್ಥಿ ಜೀವನದಿಂದಲೇ ಕಬಡ್ಡಿ ಕ್ರೀಡೆಯಲ್ಲಿ ತೊಡಗಿಸಿಕೊಂಡು, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಆಟಗಾರರಾಗಿ ಗುರುತಿಸಿಕೊಂಡಿರುವ ಮದನೂರು–ಕಿರವತ್ತಿ ಭಾಗದ ವಿಠ್ಠು ಬಮ್ಮು ಶೆಳಕೆ ಅವರು ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್‌ನ ‘ಉತ್ತರ ಕನ್ನಡ ಸ್ಟಾಲಿಯನ್ಸ್’ ತಂಡದ ಸಹ ಮಾಲೀಕರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಗ್ರಾಮೀಣ ಪರಿಸರದಿಂದ ಕಬಡ್ಡಿ ಆಟಗಾರರಾಗಿ ತಮ್ಮ ಕ್ರೀಡಾ ಪಯಣ ಆರಂಭಿಸಿದ ವಿಠ್ಠು ಶೆಳಕೆ, ಶಾಲಾ ಹಂತದಲ್ಲಿಯೇ ಹಲವು ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು. ಬಳಿಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಕಬಡ್ಡಿ ಆಟಗಾರರಾಗಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾರೆ.

ಕ್ರೀಡಾ ಕ್ಷೇತ್ರದಲ್ಲಿ ತಮ್ಮ ಪಯಣದ ಜೊತೆಗೆ ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯದಲ್ಲಿಯೂ ಅವರು ತೊಡಗಿಸಿಕೊಂಡಿದ್ದಾರೆ. ಮದನೂರು ಹಾಗೂ ಕಿರವತ್ತಿ ಭಾಗದ ಯುವ ಕ್ರೀಡಾಪಟುಗಳನ್ನು ಗುರುತಿಸಿ, ಅವರಿಗೆ ಮಾರ್ಗದರ್ಶನ ಹಾಗೂ ಕ್ರೀಡಾ ಅವಕಾಶಗಳನ್ನು ಒದಗಿಸುತ್ತಿದ್ದಾರೆ.

ಉದ್ಯೋಗ ಹಾಗೂ ಕುಟುಂಬದ ಜವಾಬ್ದಾರಿಗಳ ನಡುವೆಯೂ ಕಬಡ್ಡಿ ಕ್ಷೇತ್ರದೊಂದಿಗೆ ನಿರಂತರ ಸಂಪರ್ಕದಲ್ಲಿರುವ ಅವರು, ಯುವ ಪ್ರತಿಭೆಗಳ ಬೆಳವಣಿಗೆಗೆ ಉತ್ತೇಜನ ನೀಡುತ್ತಿದ್ದಾರೆ. ಇದೀಗ ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್‌ನ ತಂಡದ ಸಹ ಮಾಲೀಕರಾಗಿ ಜವಾಬ್ದಾರಿ ವಹಿಸಿಕೊಂಡಿರುವುದು ಅವರ ಕ್ರೀಡಾ ಪಯಣದ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ.

ವಿಠ್ಠು ಬಮ್ಮು ಶೆಳಕೆ ಅವರ ಈ ಸಾಧನೆಗೆ ದನಗರ ಸಮಾಜದ ಮುಖಂಡರು, ಮದನೂರು–ಕಿರವತ್ತಿ ಭಾಗದ ಕ್ರೀಡಾಭಿಮಾನಿಗಳು ಹಾಗೂ ಉತ್ತರ ಕನ್ನಡ ಜಿಲ್ಲೆಯ ಕ್ರೀಡಾಪ್ರೇಮಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share