Monday, September 7, 2026
Join WhatsApp Group
HomeLocal Newsಎಸ್‌ಐಆರ್ ಅಭಿಯಾನವನ್ನು ಯಶಸ್ವಿಗೊಳಿಸಿ; ಶಾಸಕ ಶಿವರಾಮ ಹೆಬ್ಬಾರ್

ಎಸ್‌ಐಆರ್ ಅಭಿಯಾನವನ್ನು ಯಶಸ್ವಿಗೊಳಿಸಿ; ಶಾಸಕ ಶಿವರಾಮ ಹೆಬ್ಬಾರ್

ಯಲ್ಲಾಪುರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪಟ್ಟಿಯ ಶುದ್ಧತೆ ಮತ್ತು ನಿಖರತೆ ಅತ್ಯಂತ ಮಹತ್ವದ್ದಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಕುರಿತು ದೇಹಳ್ಳಿ, ನಂದೊಳ್ಳಿ, ಚಂದಗುಳಿ, ಆನಗೋಡ, ವಜ್ರಳ್ಳಿ, ಇಡಗುಂದಿ ಹಾಗೂ ಮಾವಿನಮನೆ ಭಾಗದ ಪಕ್ಷದ ಕಾರ್ಯಕರ್ತರಿಗೆ ಮಾಹಿತಿ ನೀಡುವ ಉದ್ದೇಶದಿಂದ ಆಯೋಜಿಸಲಾದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಎಸ್‌ಐಆರ್ ಅಭಿಯಾನವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು, ಪಕ್ಷದ ಕಾರ್ಯಕರ್ತರು ಹಾಗೂ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕಿದೆ. ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಹೊರಗುಳಿಯದಂತೆ ಜಾಗ್ರತೆ ವಹಿಸುವುದು ಅಗತ್ಯ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿ.ಎಸ್. ಭಟ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಕೆ. ಭಟ್, ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಉಪಾಧ್ಯಕ್ಷ ಪ್ರೇಮಾನಂದ ನಾಯ್ಕ, ಪ್ರಚಾರ ಸಮಿತಿ ಅಧ್ಯಕ್ಷ ನರಸಿಂಹ ನಾಯ್ಕ, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಉಲ್ಲಾಸ್ ಶಾನಭಾಗ ಸೇರಿದಂತೆ ಪಕ್ಷದ ವಿವಿಧ ಹಂತದ ಪದಾಧಿಕಾರಿಗಳು, ಕಾರ್ಯಕರ್ತರು, ಘಟಕಾಧ್ಯಕ್ಷರು ಹಾಗೂ ಬೂತ್ ಅಧ್ಯಕ್ಷರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share