Friday, July 24, 2026
Join WhatsApp Group
HomeCrimeಬಾವಿಯಲ್ಲಿದ್ದ ನೀರಿನ ಪಂಪ್ ಮಾಯ!

ಬಾವಿಯಲ್ಲಿದ್ದ ನೀರಿನ ಪಂಪ್ ಮಾಯ!

ಶಿರಸಿ: ಮನೆಯ ಬಾವಿಯಲ್ಲಿ ಅಳವಡಿಸಲಾಗಿದ್ದ ನೀರಿನ ಪಂಪ್‌ಸೆಟ್ ಕಳ್ಳತನವಾಗಿರುವ ಘಟನೆ ಶಿರಸಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಸುಬ್ರಾಯ ರಾಮಚಂದ್ರ ಹೆಗಡೆ ಅವರು ನೀಡಿದ ದೂರಿನ ಪ್ರಕಾರ, ಜೂನ್ 28ರ ಬೆಳಿಗ್ಗೆ 9 ಗಂಟೆಯಿಂದ ಜುಲೈ 4ರ ಬೆಳಿಗ್ಗೆ 10 ಗಂಟೆಯ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಅವರ ಮನೆಯ ಬಾವಿಯಲ್ಲಿದ್ದ ಸುಮಾರು ₹7,550 ಮೌಲ್ಯದ 0.5 ಎಚ್‌ಪಿ ನೀರಿನ ಪಂಪ್‌ಸೆಟ್ ಕಳವು ಮಾಡಿಕೊಂಡು ಹೋಗಿದ್ದಾರೆ.

ಕಳುವಾದ ಪಂಪ್‌ಸೆಟ್ ಪತ್ತೆಹಚ್ಚಿ, ಕಳ್ಳರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share