ಕಾರವಾರ: ವಿಧಾನಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಅಕ್ಟೋಬರ್ 23ರಂದು ಅರ್ಹ ಪದವೀಧರ ಮತದಾರ ನೌಕರರು ಪೂರ್ವಾನುಮತಿ ಪಡೆದು ವಿಶೇಷ ಸಾಂದರ್ಭಿಕ ರಜೆ ಪಡೆಯಬಹುದಾಗಿದೆ.
ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಮತಕ್ಷೇತ್ರ ವ್ಯಾಪ್ತಿಯ ಅರ್ಹ ಪದವೀಧರ ಮತದಾರರಿಗೆ ಮಾತ್ರ ಈ ಸೌಲಭ್ಯ ಅನ್ವಯವಾಗಲಿದೆ ಎಂದು ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಕೆ.ಎಂ. ಜಾನಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.