Friday, July 24, 2026
Join WhatsApp Group
HomeLocal Newsಅಂಬೇಡ್ಕರ್ ಮೆಮೋರಿಯಲ್ ಟ್ರಸ್ಟ್ ಉದ್ಘಾಟನೆ; ವಿವೇಕ್ ಹೆಬ್ಬಾರ್ ಭಾಗಿ

ಅಂಬೇಡ್ಕರ್ ಮೆಮೋರಿಯಲ್ ಟ್ರಸ್ಟ್ ಉದ್ಘಾಟನೆ; ವಿವೇಕ್ ಹೆಬ್ಬಾರ್ ಭಾಗಿ

ಯಲ್ಲಾಪುರ: ಪಟ್ಟಣದ ಅಡಿಕೆ ಭವನದಲ್ಲಿ ಆಯೋಜಿಸಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಮೆಮೋರಿಯಲ್ ಟ್ರಸ್ಟ್ ಉದ್ಘಾಟನಾ ಸಮಾರಂಭ ಹಾಗೂ 135ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಭಾಗವಹಿಸಿದರು.

ಕಾರ್ಯಕ್ರಮದ ಅಂಗವಾಗಿ ಅವರು ಬುದ್ಧ, ಬಸವ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮವನ್ನುದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಗಿರೀಶ, ರಾಜ್ಯ ಕಾರ್ಯದರ್ಶಿ ಸುಮನ್ ಜಿ ಹರಿಜನ್, ಜಿಲ್ಲಾಧ್ಯಕ್ಷ ಈರಣ್ಣ ವಡ್ಡರ್, ಜಿಲ್ಲಾ ಸಂಘಟನಾ ಸಂಚಾಲಕ ಮಾರುತಿ ಬೋವಿವಡ್ಡರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್. ಭಟ್, ಪ್ರಮುಖರಾದ ನರಸಿಂಹ ನಾಯ್ಕ, ಯೂತ್ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಹೆಗಡೆ, ದ್ಯಾಮಣ್ಣ ಬೋವಿವಡ್ಡರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share