Thursday, October 22, 2026
HomeLocal Newsಯಲ್ಲಾಪುರ | ಬಿಜೆಪಿಯಿಂದ ವಿಕಸಿತ ಭಾರತ ಸಂಕಲ್ಪ ಸಭೆ

ಯಲ್ಲಾಪುರ | ಬಿಜೆಪಿಯಿಂದ ವಿಕಸಿತ ಭಾರತ ಸಂಕಲ್ಪ ಸಭೆ

ಯಲ್ಲಾಪುರ: ಸೇವಾ ಜ್ಯೋತಿ ನಿಮಿತ್ತ ಭಾರತೀಯ ಜನತಾ ಪಕ್ಷದ ಯಲ್ಲಾಪುರ ಮಂಡಳದ ವತಿಯಿಂದ ವಿಕಸಿತ ಭಾರತ ಸಂಕಲ್ಪ ಸಭೆ ಹಾಗೂ ಕಮಲದೀಪ ಕಾರ್ಯಕ್ರಮ ನಡೆಯಿತು.

ಮಹಿಳಾ ಮೋರ್ಚಾ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ನಾಯಕಿ ಹಾಗೂ ಸಂಘಟಕರಾದ ನಮಿತಾ ಬೀಡೀಕರ ಅವರನ್ನು ಪಕ್ಷದ ವತಿಯಿಂದ ಗೌರವಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ದೇಶದ ಅಭಿವೃದ್ಧಿಯ ಕುರಿತು ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ, ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ ಭಟ್ಟ ಹಾಗೂ ಹಿರಿಯ ಮುಖಂಡರಾದ ಶ್ಯಾಮಿಲಿ ಪಾಟಣಕರ ಮಾತನಾಡಿದರು. ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರುತಿ ಹೆಗಡೆ ಸ್ವಾಗತಿಸಿದರು. ಮಂಡಳ ಪ್ರಧಾನ ಕಾರ್ಯದರ್ಶಿ ನಟರಾಜ ಗೌಡ, ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಭಟ್ಟ ಹಾಸಣಗಿ, ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸೋಮೇಶ್ವರ ನಾಯ್ಕ, ಯುವಮೋರ್ಚಾ ಅಧ್ಯಕ್ಷ ರಜತ ಬದ್ದಿ ಸೇರಿದಂತೆ ಪಕ್ಷದ ಪದಾಧಿಕಾರಿಗಳಾದ ರಾಮಣ್ಣ ಚಿಕ್ಯಾನಮನೆ, ಪ್ರದೀಪ ಯಲ್ಲಾಪುರಕರ, ರವಿ ದೇವಾಡಿಗ, ಜಿ.ಆರ್. ಭಾಗ್ವತ, ಸುಬ್ಬಣ್ಣ ಬೋಳ್ಮನೆ, ಗಜಾನನ ನಾಯ್ಕ, ಮಹಾಬಲೇಶ್ವರ ಭಟ್ಟ, ವಿನೀಷ ಭಟ್ಟ, ಗಣೇಶ ಹೆಗಡೆ, ಸದಾನಂದ ಮರಾಠಿ, ತುಲಸಿದಾಸ ನಾಯ್ಕ ಸೇರಿದಂತೆ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share