Saturday, September 19, 2026
Join WhatsApp Group
HomeLocal Newsಯಲ್ಲಾಪುರ: ಚೆಸ್ ಕಲಿಗಳಿಗಾಗಿ ಜಿಲ್ಲಾ ಮಟ್ಟದ ಪಂದ್ಯಾವಳಿ

ಯಲ್ಲಾಪುರ: ಚೆಸ್ ಕಲಿಗಳಿಗಾಗಿ ಜಿಲ್ಲಾ ಮಟ್ಟದ ಪಂದ್ಯಾವಳಿ

ಯಲ್ಲಾಪುರ: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ತಾಲೂಕು ಘಟಕದ ವತಿಯಿಂದ ನಾಲ್ಕನೇ ವರ್ಷದ ಜಿಲ್ಲಾ ಮಟ್ಟದ ಓಪನ್ ರ್ಯಾಪಿಡ್ ಚೆಸ್ ಪಂದ್ಯಾವಳಿಯನ್ನು ಅಕ್ಟೋಬರ್ 4ರಂದು ಯಲ್ಲಾಪುರ ಪಟ್ಟಣದ ಎಪಿಎಂಸಿ ರೈತ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ವೇಣುಗೋಪಾಲ ಮದ್ಗುಣಿ ತಿಳಿಸಿದ್ದಾರೆ.

ಪಂದ್ಯಾವಳಿಯಲ್ಲಿ ವಿವಿಧ ವಯೋಮಾನದ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿದ್ದು, ವಿಜೇತರಿಗೆ ಒಟ್ಟು 53 ಟ್ರೋಫಿಗಳನ್ನು ವಿತರಿಸಲಾಗುತ್ತದೆ. 8, 10, 12 ಹಾಗೂ 14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಟ್ರೋಫಿಗಳನ್ನು ನೀಡಲಾಗುತ್ತದೆ.

16 ವರ್ಷದೊಳಗಿನ ಸ್ಪರ್ಧಿಗಳಿಗೂ ಬಹುಮಾನಗಳಿದ್ದು, 16 ವರ್ಷ ಮೇಲ್ಪಟ್ಟವರ ಮುಕ್ತ ವಿಭಾಗದಲ್ಲಿ ಪ್ರಥಮ ಬಹುಮಾನ ₹2,000 ಹಾಗೂ ಟ್ರೋಫಿ, ದ್ವಿತೀಯ ₹1,500, ತೃತೀಯ ₹1,000, ನಾಲ್ಕನೇ ₹750 ಮತ್ತು ಐದನೇ ₹500 ಹಾಗೂ ಟ್ರೋಫಿ ನೀಡಲಾಗುತ್ತದೆ.

ಇದರ ಜೊತೆಗೆ 8, 10, 12 ಹಾಗೂ 14 ವರ್ಷದೊಳಗಿನ ವಿಭಾಗಗಳಲ್ಲಿ ಉತ್ತಮ ಯಲ್ಲಾಪುರ ಆಟಗಾರರಿಗೆ ವಿಶೇಷ ಟ್ರೋಫಿ ನೀಡಲಾಗುತ್ತದೆ. ಪಂದ್ಯಾವಳಿಯಲ್ಲಿ ಭಾಗವಹಿಸುವ ಎಲ್ಲ ಸ್ಪರ್ಧಿಗಳಿಗೂ ಪದಕ ಹಾಗೂ ಪ್ರಮಾಣಪತ್ರ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪಂದ್ಯಾವಳಿಗೆ ಮೊದಲ 150 ನೋಂದಣಿಗಳಿಗೆ ಮಾತ್ರ ಆದ್ಯತೆ ನೀಡಲಾಗುತ್ತದೆ. ಸೆಪ್ಟೆಂಬರ್ 28 ನೋಂದಣಿಗೆ ಕೊನೆಯ ದಿನವಾಗಿದ್ದು, ಪ್ರವೇಶ ಶುಲ್ಕ ₹350 ನಿಗದಿಪಡಿಸಲಾಗಿದೆ. ನಿಗದಿತ ದಿನಾಂಕದ ನಂತರ ನೋಂದಾಯಿಸುವವರಿಗೆ ₹400 ಶುಲ್ಕ ವಿಧಿಸಲಾಗುತ್ತದೆ. ಪಂದ್ಯಾವಳಿ ನಡೆಯುವ ದಿನ ಸ್ಥಳದಲ್ಲೇ ನೋಂದಣಿಗೆ ಅವಕಾಶ ಇರುವುದಿಲ್ಲ. ಪಂದ್ಯಗಳು ಬೆಳಿಗ್ಗೆ 9.30ಕ್ಕೆ ಆರಂಭವಾಗಲಿವೆ.

ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಆನಂದಸ್ವಾಮಿ ಅವರನ್ನು (8762480128) ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad

Most Popular

error: Content is protected !!
Share