Monday, September 7, 2026
Join WhatsApp Group
HomeLocal Newsದ್ವಿಚಕ್ರ ವಾಹನ ತಂತ್ರಜ್ಞರು ಸರ್ಕಾರದ ಸೌಲಭ್ಯ ಪಡೆಯಲಿ

ದ್ವಿಚಕ್ರ ವಾಹನ ತಂತ್ರಜ್ಞರು ಸರ್ಕಾರದ ಸೌಲಭ್ಯ ಪಡೆಯಲಿ

ಯಲ್ಲಾಪುರ: ದ್ವಿಚಕ್ರ ವಾಹನಗಳ ದುರಸ್ತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ತಂತ್ರಜ್ಞರು ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಂಡು ತಮ್ಮ ವೃತ್ತಿ ಹಾಗೂ ಜೀವನಮಟ್ಟವನ್ನು ಸುಧಾರಿಸಿಕೊಳ್ಳಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಯಲ್ಲಾಪುರ ಪಟ್ಟಣದಲ್ಲಿ ಶನಿವಾರ ಶ್ರೀ ಗ್ರಾಮದೇವಿ ದ್ವಿಚಕ್ರ ವಾಹನಗಳ ತಂತ್ರಜ್ಞರ ಬಳಗದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದ್ವಿಚಕ್ರ ವಾಹನಗಳ ದುರಸ್ತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ತಂತ್ರಜ್ಞರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅವರ ಕಲ್ಯಾಣಕ್ಕಾಗಿ ಸರ್ಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಮಾತನಾಡಿದ ಅವರು, ಅಸಂಘಟಿತ ಕಾರ್ಮಿಕರು ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಅವುಗಳ ಪ್ರಯೋಜನ ಪಡೆಯಬೇಕು ಎಂದರು.

ಕಾರ್ಮಿಕರು ತಮ್ಮ ವೃತ್ತಿಯಲ್ಲಿ ಕೌಶಲ್ಯವನ್ನು ಮತ್ತಷ್ಟು ಅಭಿವೃದ್ಧಿಪಡಿಸಿಕೊಳ್ಳುವುದರ ಜೊತೆಗೆ, ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಅಸಂಘಟಿತ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ವತಿಯಿಂದ ನೀಡಲಾಗುವ ವಿವಿಧ ಪರಿಕರಗಳನ್ನು ಶಾಸಕರು ವಿತರಿಸಿದರಲ್ಲದೆ, ದ್ವಿಚಕ್ರ ವಾಹನಗಳ ದುರಸ್ತಿ ದರಪಟ್ಟಿಯನ್ನು ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ದ್ವಿಚಕ್ರ ವಾಹನಗಳ ತಂತ್ರಜ್ಞರ ಬಳಗದ ಸದಸ್ಯರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share