Friday, July 24, 2026
Join WhatsApp Group
HomeLocal Newsಉಪಳೇಶ್ವರ ಬಳಿ ಭೀಕರ ಬೈಕ್ ಅಪಘಾತ

ಉಪಳೇಶ್ವರ ಬಳಿ ಭೀಕರ ಬೈಕ್ ಅಪಘಾತ

ಯುವಕಸಾ*ವು, ಮತ್ತೋರ್ವನಸ್ಥಿತಿಗಂಭೀರ

ಯಲ್ಲಾಪುರ: ತಾಲೂಕಿನ ಉಪಳೇಶ್ವರ ಸಮೀಪ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ನಡೆದಿದೆ.

ಮುಂಡಗೋಡ ತಾಲೂಕಿನ ಕರ್ಲಿ ಸಮೀಪದ ಪ್ರದೀಪ (26) ಹಾಗೂ ಮನ್ವತ್ (33) ಅವರು ಬೈಕ್‌ನಲ್ಲಿ ಶಿರಸಿ ಕಡೆಗೆ ತೆರಳುತ್ತಿದ್ದರು. ಯಲ್ಲಾಪುರ-ಶಿರಸಿ ರಸ್ತೆಯ ಉಪಳೇಶ್ವರ ದಾಟಿ ಮಳಲಗಾಂ ಬಳಿ ತಲುಪುತ್ತಿದ್ದಂತೆ ಬೈಕ್ ಸ್ಕಿಡ್ ಆಗಿ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ.

ಅಪಘಾತದ ತೀವ್ರತೆಗೆ ಬೈಕ್‌ನಲ್ಲಿದ್ದ ಇಬ್ಬರೂ ರಸ್ತೆ ಬದಿಗೆ ಎಸೆಯಲ್ಪಟ್ಟಿದ್ದು, ಸವಾರ ಪ್ರದೀಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿ ಸವಾರ ಮನ್ವತ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತ ಗಮನಿಸಿದ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮನ್ವತ್ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share