Friday, July 24, 2026
Join WhatsApp Group
HomeLocal Newsನೀಟ್‌ ಸೋರಿಕೆ, ಇಂಧನ ಬೆಲೆಯೇರಿಕೆ; ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ

ನೀಟ್‌ ಸೋರಿಕೆ, ಇಂಧನ ಬೆಲೆಯೇರಿಕೆ; ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ

ಯಲ್ಲಾಪುರ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪೆಟ್ರೋಲ್–ಡೀಸೆಲ್ ದರ ಏರಿಕೆಯನ್ನು ಖಂಡಿಸಿ ಯಲ್ಲಾಪುರ ತಾಲೂಕಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವು ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸಕ್ಕೆ ದೊಡ್ಡ ಧಕ್ಕೆಯಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು ಹಗಲಿರುಳು ಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದರೂ, ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಘಟನೆಗಳು ಅವರ ಭವಿಷ್ಯವನ್ನು ಅತಂತ್ರಗೊಳಿಸುತ್ತಿವೆ ಎಂದರು.

ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಹಾಗೂ ಭ್ರಷ್ಟ ಆಡಳಿತ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ಕನಸುಗಳು ನಾಶವಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಯುವಜನತೆ ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.

ಇದೇ ವೇಳೆ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಿಂದ ಸಾಮಾನ್ಯ ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ದಿನನಿತ್ಯದ ಬದುಕು ಮತ್ತಷ್ಟು ದುಬಾರಿಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರ ತಕ್ಷಣವೇ ಇಂಧನ ದರ ಇಳಿಕೆ ಮಾಡುವ ಜೊತೆಗೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿಜಯ ಮಿರಾಶಿ, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿ.ಎಸ್. ಭಟ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಕೆ. ಭಟ್, ಡಾ. ರವಿ ಭಟ್ ಬರಗದ್ದೆ, ಪ್ರಚಾರ ಸಮಿತಿಯ ಅಧ್ಯಕ್ಷ ನರಸಿಂಹ ನಾಯ್ಕ, ತಾಲೂಕಾ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಉಲ್ಲಾಸ್ ಶಾನಭಾಗ, ತಾಲೂಕಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಫೈರೋಜ್ ಶೇಖ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಮೋಧ ಶಿರಸಿಕರ್, ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವಿಶ್ವಾಸ್ ನಾಯ್ಕ, ತಾಲೂಕಾಧ್ಯಕ್ಷ ಗಣೇಶ ಹೆಗಡೆ, ಉಪಾಧ್ಯಕ್ಷ ಮಹೇಶ್ ನಾಯ್ಕ, ಮಹಿಳಾ ಕಾಂಗ್ರೆಸ್‌ನ ಪೂಜಾ ನೇತ್ರೇಕರ, ಸರಸ್ವತಿ ಗುನಗಾ, ಮುಷರತ್ ಖಾನ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share