Sunday, September 6, 2026
Join WhatsApp Group
HomeCrimeಯಲ್ಲಾಪುರ | 17 ವರ್ಷದ ಯುವತಿ ನಾಪತ್ತೆ; ಅಪಹರಣದ ಶಂಕೆ

ಯಲ್ಲಾಪುರ | 17 ವರ್ಷದ ಯುವತಿ ನಾಪತ್ತೆ; ಅಪಹರಣದ ಶಂಕೆ

ಯಲ್ಲಾಪುರ: ತಾಲೂಕಿನ ಮಾದೇವಕೊಪ್ಪ ಗ್ರಾಮದ 17 ವರ್ಷ 8 ತಿಂಗಳ ಯುವತಿಯೊಬ್ಬಳು ಮನೆಯಿಂದ ಹೊರಟ ಬಳಿಕ ನಾಪತ್ತೆಯಾಗಿರುವ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾದೇವಕೊಪ್ಪ ಗ್ರಾಮದ ನಿವಾಸಿಯೊಬ್ಬರು ನೀಡಿದ ದೂರಿನ ಪ್ರಕಾರ, ಅವರ ಮಗಳು ಸಂಗಮಾ (ಹೆಸರು ಬದಲಾಯಿಸಿದೆ) 25ರಂದು ರಾತ್ರಿ ಸುಮಾರು 8.30ಕ್ಕೆ ಮನೆಯಿಂದ ಹೊರಟಿದ್ದಾಳೆ. ಬೆಂಗಳೂರಿನಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ಹೋಗಿ ಬರುವುದಾಗಿ ಮನೆಯವರಿಗೆ ತಿಳಿಸಿ ತೆರಳಿದ್ದಳು ಎನ್ನಲಾಗಿದೆ.

ಆದರೆ ಇದುವರೆಗೆ ಸಂಗಮಾ ಮನೆಗೂ ವಾಪಸ್ ಬಂದಿಲ್ಲ. ಬೆಂಗಳೂರಿನಲ್ಲಿರುವ ಸಂಬಂಧಿಕರ ಮನೆಗೂ ಹೋಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹೀಗಾಗಿ ಯುವತಿ ಎಲ್ಲಿಗೆ ತೆರಳಿದ್ದಾಳೆ ಎಂಬುದು ತಿಳಿದುಬಂದಿಲ್ಲ. ಯಾರಾದರೂ ಆಕೆಯನ್ನು ಅಪಹರಿಸಿಕೊಂಡು ಹೋಗಿರುವ ಸಾಧ್ಯತೆಯ ಬಗ್ಗೆಯೂ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

ಮಗಳು ಕಾಣೆಯಾಗಿರುವ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸಂಬಂಧಿಕರ ಮನೆಗಳಲ್ಲಿ ಹಾಗೂ ವಿವಿಧ ಕಡೆಗಳಲ್ಲಿ ಹುಡುಕಾಟ ನಡೆಸಿದ್ದಾರೆ. ದೂರವಾಣಿ ಮೂಲಕವೂ ವಿಚಾರಿಸಿದರೂ ಯಾವುದೇ ಮಾಹಿತಿ ದೊರೆಯದ ಹಿನ್ನೆಲೆಯಲ್ಲಿ ಕುಟುಂಬದವರೊಂದಿಗೆ ಚರ್ಚಿಸಿ ಆಗಸ್ಟ್ 29ರಂದು ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.

ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪ್ರಕರಣದ ತನಿಖಾಧಿಕಾರಿಯಾಗಿ ಪಿಎಸ್‌ಐ ಮಹಾವೀರ ಕಾಂಬಳೆ ಕಾರ್ಯನಿರ್ವಹಿಸುತ್ತಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share