Monday, September 7, 2026
Join WhatsApp Group
HomeCrimeಬೈಕ್‌ ಸ್ಕಿಡ್‌: ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಬೈಕ್‌ ಸ್ಕಿಡ್‌: ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಯಲ್ಲಾಪುರ: ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಬೈಕ್‌ ಸ್ಕಿಡ್‌ ಆಗಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಯಲ್ಲಾಪುರ ತಾಲೂಕಿನ ಹಲಸಿನಕೊಪ್ಪ – ಕನೇನಹಳ್ಳಿ ಮಾರ್ಗದಲ್ಲಿ ನಡೆದಿದೆ.

ಮೃತರನ್ನು ಉಮ್ಮಚಗಿಯ ಹುಣಸೆಮನೆ ಸೋಮಾ ಸುಬ್ಬಾ ಸಿದ್ದಿ (51) ಎಂದು ಗುರುತಿಸಲಾಗಿದೆ.

ಆ.13ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಸೋಮಾ ಸಿದ್ದಿ ಅವರು ತಮ್ಮ ಕೆಎ-31/ವಿ-4767 ಸಂಖ್ಯೆಯ ಮೋಟಾರ್‌ಸೈಕಲ್‌ನಲ್ಲಿ ಹಲಸಿನಕೊಪ್ಪದಿಂದ ಕನೇನಹಳ್ಳಿ ಕಡೆಗೆ ತೆರಳುತ್ತಿದ್ದರು. ಈ ವೇಳೆ ಬೈಕ್‌ ಅನ್ನು ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಸ್ಕಿಡ್‌ ಆಗಿ ಬಿದ್ದಿದ್ದಾರೆ.

ಅಪಘಾತದಲ್ಲಿ ಅವರ ಬಲ ಕಾಲಿನ ಮೊಣಕಾಲಿಗೆ ಗಂಭೀರ ಗಾಯವಾಗಿದ್ದು, ಗುಪ್ತಾಂಗದ ಭಾಗದಲ್ಲೂ ಗಾಯಗಳಾಗಿದ್ದವು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಕೆ.ಎಸ್. ಹೆಗಡೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಆ.14ರ ಮಧ್ಯರಾತ್ರಿ 12.20ರ ಸುಮಾರಿಗೆ ಸೋಮಾ ಸಿದ್ದಿ ಮೃತಪಟ್ಟಿದ್ದಾರೆ. 

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share