Friday, July 24, 2026
Join WhatsApp Group
HomeLocal Newsರಕ್ತದಾನ, ಉಚಿತ ವೈದ್ಯಕೀಯ ಶಿಬಿರ

ರಕ್ತದಾನ, ಉಚಿತ ವೈದ್ಯಕೀಯ ಶಿಬಿರ

ಯಲ್ಲಾಪುರ: ಸೋಂದಾ ಶ್ರೀ ಸ್ವರ್ಣವಲ್ಲೀ ಮಠದ ಶ್ರೀಮದ್ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮಿಗಳ ವರ್ಧಂತಿ ಉತ್ಸವದ ಅಂಗವಾಗಿ ರಕ್ತದಾನ ಶಿಬಿರ, ಉಚಿತ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿತ್ತು.

ಗ್ರಾಮಾಭ್ಯುದಯ ಶ್ರೀ ಸೋಂದಾ ಸ್ವರ್ಣವಲ್ಲಿ, ಮಂಚಿಕೇರಿಯ ಮಹಿಷಾಸುರ ಮರ್ಧಿನಿ ದೇವಿ ದೇವಸ್ಥಾನ ಕಂಪ್ಲಿ ಹಾಗೂ ಟಿ.ಎಸ್.ಎಸ್. ಶ್ರೀಪಾದ ಹೆಗಡೆ ಕಡೆವೆ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ರಕ್ತನಿಧಿ ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ಮಹಿಷಾಸುರ ಮರ್ಧಿನಿ ದೇವಸ್ಥಾನದ ಸಭಾಂಗಣದಲ್ಲಿ ಶಿಬಿರ ನಡೆಯಿತು.

ಶಿಬಿರದಲ್ಲಿ ಡಾ. ಪಿ.ಎಸ್. ಹೆಗಡೆ, ಡಾ. ವಿರೇಶ್ ಎಸ್. ಬಾಳೇಹೋಸುರು ಹಾಗೂ ಡಾ. ವೀಣಾ ವೆರ್ಣೇಕರ್ ವೈದ್ಯಕೀಯ ತಪಾಸಣೆ ನಡೆಸಿದರು.

ಒಟ್ಟು 80 ಜನರು ಶಿಬಿರದ ಪ್ರಯೋಜನ ಪಡೆದುಕೊಂಡಿದ್ದು, 42 ಜನರು ರಕ್ತದಾನ ಮಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮಾಭ್ಯುದಯ ಅಧ್ಯಕ್ಷ ರಾಮಚಂದ್ರ ಹೆಗಡೆ ಕಂಚನಹಳ್ಳಿ, ಕಾರ್ಯದರ್ಶಿ ಸಂತೋಷ ಭಟ್ಟ, ಸದಸ್ಯ ಹೇಮಂತ ಹೆಗಡೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share