Thursday, October 22, 2026
HomeLocal Newsಮೋಹನ ಲಿಂಬಿಕಾಯಿ ಪರ ಲಕ್ಷ್ಮಣ ಸವದಿ, ಹೆಬ್ಬಾರ್ ಮತಯಾಚನೆ

ಮೋಹನ ಲಿಂಬಿಕಾಯಿ ಪರ ಲಕ್ಷ್ಮಣ ಸವದಿ, ಹೆಬ್ಬಾರ್ ಮತಯಾಚನೆ

ಯಲ್ಲಾಪುರ: ಪಶ್ಚಿಮ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರ ಗೆಲುವಿಗೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಸಚಿವ ಲಕ್ಷ್ಮಣ ಸವದಿ ಹಾಗೂ ಶಾಸಕ ಶಿವರಾಮ ಹೆಬ್ಬಾರ್ ಕರೆ ನೀಡಿದರು.

ಯಲ್ಲಾಪುರ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ಭಾನುವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಸಚಿವ ಲಕ್ಷ್ಮಣ ಸವದಿ ಹಾಗೂ ಶಾಸಕ ಶಿವರಾಮ ಹೆಬ್ಬಾರ್ ಅವರು ಮೋಹನ ಲಿಂಬಿಕಾಯಿ ಪರ ಮತಯಾಚಿಸಿದರು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಟಿ. ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್. ಭಟ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ರಾಠೋಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿಜಯ ಮಿರಾಶಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎನ್.ಕೆ. ಭಟ್, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಪ್ರೇಮಾನಂದ ನಾಯ್ಕ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಲ್ಲಾಸ ಶಾನಭಾಗ ಸೇರಿದಂತೆ ಪಕ್ಷದ ವಿವಿಧ ಹಂತಗಳ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share