Friday, July 24, 2026
Join WhatsApp Group
HomeLocal Newsಹಿತ್ಲಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಕಾರ್ಯಕರ್ತರು

ಹಿತ್ಲಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಕಾರ್ಯಕರ್ತರು

ಯಲ್ಲಾಪುರ: ಇಲ್ಲಿನ ಹಿತ್ಲಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಇಳೇಹಳ್ಳಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತಗಳನ್ನು ಒಪ್ಪಿಕೊಂಡು ಕಾರ್ಯಕರ್ತರು ಇಂದು ಅಧಿಕೃತವಾಗಿ ಸೇರ್ಪಡೆಯಾಗಿದ್ದು, ಕೆಪಿಸಿಸಿ ಸದಸ್ಯರಾದ ವಿವೇಕ್ ಹೆಬ್ಬಾರ್ ಪಕ್ಷದ ಶಾಲು ಹಾಕಿ ಕಾರ್ಯಕರ್ತರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ಸೇರ್ಪಡೆಗೊಂಡವರಲ್ಲಿ ದಿನೇಶ್ ಕುಣಬಿ, ಬಾಲಚಂದ್ರ ಕುಣಬಿ, ಗಣಪತಿ ಕುಣಬಿ, ನಾರಾಯಣ ಕುಣಬಿ, ಈರಪ್ಪ ಬೋವಿವದ್ದರ್, ಸತೀಶ ಕುಣಬಿ, ಕೃಷ್ಣ ಕುಣಬಿ, ಕೃಷ್ಣ ಬಿ. ಗೌಡ ಸೇರಿದಂತೆ ಅನೇಕರು ಇದ್ದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿ.ಎಸ್. ಭಟ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಕೆ. ಭಟ್, ಡಾ. ರವಿ ಭಟ್ ಬರಗದ್ದೆ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಡಿ.ಡಿ. ನಾಯ್ಕ, ಹಿಂದುಳಿದ ವರ್ಗದ ಜಿಲ್ಲಾ ಉಪಾಧ್ಯಕ್ಷ ಪ್ರೇಮಾನಂದ ನಾಯ್ಕ, ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ನರಸಿಂಹ ನಾಯ್ಕ, ಘಟಕಾಧ್ಯಕ್ಷ ಶೇಖರ ಸಿದ್ಧಿ, ಸ್ಥಳೀಯ ಮುಖಂಡರಾದ ನಾಗೇಂದ್ರ ಹೆಗಡೆ ಹರಿಗದ್ದೆ, ಆರ್.ಬಿ. ರಾಯ್ಕರ್, ತಾಲೂಕು ಪಂಚಾಯತ ಮಾಜಿ ಉಪಾಧ್ಯಕ್ಷೆ ಸುಜಾತಾ ಸಿದ್ಧಿ, ತಾ.ಪಂ ಮಾಜಿ ಸದಸ್ಯೆ ರಾಧಾ ಹೆಗಡೆ, ಯುವ ಕಾಂಗ್ರೆಸ್ ಕ್ಷೇತ್ರಾಧ್ಯಕ್ಷ ವಿಶ್ವಾಸ್ ನಾಯ್ಕ, ತಾಲೂಕು ಅಧ್ಯಕ್ಷ ಗಣೇಶ ಹೆಗಡೆ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share